ಬೆಂಗಳೂರು: ಮೊದಲೇ ಬೆಲೆ ಏರಿಕೆಯಿಂದ ರಾಜ್ಯದ ಜನತೆಗೆ ತೆರಿಗೆ ಭಾರ ಹೆಚ್ಚಾಗಲಿದೆ. ಆದಾಯ ಹೆಚ್ಚಳಕ್ಕೆ ರಾಜ್ಯ ಸರ್ಕಾರ ಮುಂದಾಗಿದ್ದು, ಮುಂದಿನ ಬಜೆಟ್ ನಲ್ಲಿ ತೆರಿಗೆ ಪರಿಷ್ಕರಣೆ ಮಾಡುವ ಸಾಧ್ಯತೆಯಿದೆ. ಆರ್ಥಿಕತೆ ದೃಷ್ಟಿಯಿಂದ ತೆರಿಗೆ ಮತ್ತು ತೆರಿಗೆಯೇತರ ಆದಾಯವನ್ನು ಹೆಚ್ಚಳ ಮಾಡುವ ನಿಟ್ಟಿನಲ್ಲಿ ಚಿಂತನೆ ನಡೆದಿದೆ. ತೆರಿಗೆ ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಪ್ರಸ್ತುತ ಪೆಟ್ರೋಲ್, ಡೀಸೆಲ್, ಅಡುಗೆ ಎಣ್ಣೆ, ಆಹಾರ ಧಾನ್ಯ, ತರಕಾರಿ ಹೀಗೆ ದಿನಬಳಕೆ ವಸ್ತುಗಳ ಬೆಲೆ ಗಗನಕ್ಕೇರಿದ್ದು, ಸಂಕಷ್ಟದಲ್ಲಿರುವ ಜನರಿಗೆ ತೆರಿಗೆ ಹೊರೆಬೀಳಲಿದೆ ಎನ್ನಲಾಗಿದೆ.
ತೆರಿಗೆ ಆದಾಯವನ್ನು ಪರಿಷ್ಕರಿಸಿ ಹೆಚ್ಚುವರಿ ಆದಾಯ ನಿರೀಕ್ಷಿಸಲಾಗುತ್ತದೆ. ಆರ್ಥಿಕ ಚಟುವಟಿಕೆ ಸುಧಾರಣೆ ಮತ್ತು ಬೆಳವಣಿಗೆ ದರಕ್ಕೆ ಅನುಗುಣವಾಗಿ ತೆರಿಗೆ ಪರಿಷ್ಕರಣೆ ಮಾಡಲಾಗುತ್ತದೆ. ಇದನ್ನು ಆಧರಿಸಿ ಬಜೆಟ್ ಮಂಡನೆ ಮಾಡಲಾಗುತ್ತದೆ. ತೆರಿಗೆ ಮತ್ತು ತೆರಿಗೆಯೇತರ ರಾಜಸ್ವ ಸಂಗ್ರಹ ಪರಿಶೀಲನೆ ನಡೆಸಲಾಗುವುದು. ಈ ನಿಟ್ಟಿನಲ್ಲಿ ಚಿಂತನೆ ನಡೆದಿದ್ದು, ಮುಂದಿನ ಬಜೆಟ್ ನಲ್ಲಿ ಪ್ರಸ್ತಾಪವಾಗುವ ಸಾಧ್ಯತೆ ಇದೆ ಎನ್ನಲಾಗಿದೆ.