alex Certify ಖಾಸಗಿ ಬಸ್ ಸೇರಿದಂತೆ ಎಲ್ಲಾ ಪ್ರಯಾಣಿಕ, ಸರಕು ವಾಹನ ಮಾಲೀಕರಿಗೆ ಸರ್ಕಾರದಿಂದ ಸಿಹಿ ಸುದ್ದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಖಾಸಗಿ ಬಸ್ ಸೇರಿದಂತೆ ಎಲ್ಲಾ ಪ್ರಯಾಣಿಕ, ಸರಕು ವಾಹನ ಮಾಲೀಕರಿಗೆ ಸರ್ಕಾರದಿಂದ ಸಿಹಿ ಸುದ್ದಿ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ಖಾಸಗಿ ವಾಹನ ಮಾಲೀಕರಿಗೆ ಸಿಹಿ ಸುದ್ದಿ ನೀಡಿದ್ದು ಅಧಿಕೃತ ಪ್ರಾಧಿಕಾರಗಳಿಂದ ಸಂಚಾರಕ್ಕೆ ಅನುಮತಿ ಪಡೆದ ವಾಹನಗಳಿಗೆ ತೆರಿಗೆ ವಿನಾಯಿತಿ ನೀಡಲಾಗಿದೆ.

ರಾಜ್ಯದ ಖಾಸಗಿ ಬಸ್ ಟೆಂಪೋ ಟ್ಯಾಕ್ಸಿಗಳಿಗೆ ಮೋಟಾರು ವಾಹನ ತೆರಿಗೆ ವಿನಾಯಿತಿ ನೀಡಲಾಗಿದೆ.

ಕೊರೋನಾ ಹಿನ್ನೆಲೆಯಲ್ಲಿ ರಾಜ್ಯವನ್ನು ಸಂಪೂರ್ಣವಾಗಿ ಲಾಕ್ಡೌನ್ ಮಾಡಿರುವುದರಿಂದ ಇದೊಂದು ವಿಶೇಷ ಪ್ರಕರಣವೆಂದು ಪರಿಗಣಿಸಿ ಕರ್ನಾಟಕ ಮೋಟಾರು ವಾಹನ ತೆರಿಗೆ ಕಾಯ್ದೆ ಅನ್ವಯ ರಾಜ್ಯದಲ್ಲಿ ನೊಂದಾಯಿಸಿರುವ(ಹೊಸ ವಾಹನಗಳ ನೊಂದಣಿಯನ್ನು ಹೊರತುಪಡಿಸಿ) ಎಲ್ಲಾ ಪ್ರಯಾಣಿಕರು ಮತ್ತು ಸರಕು ಸಾರಿಗೆ ವಾಹನಗಳ ಮೋಟಾರು ವಾಹನಗಳ ತೆರಿಗೆಯನ್ನು ದಿನಾಂಕ 24.3.2020 ರಿಂದ 23.5.2020ರ ವರೆಗೆ ಒಟ್ಟು ಎರಡು ತಿಂಗಳ ಅವಧಿಗೆ ತೆರಿಗೆ ಪಾವತಿಯಿಂದ ವಿನಾಯಿತಿ ನೀಡಲಾಗಿದೆ ಎಂದು ಸಾರಿಗೆ ಇಲಾಖೆಯಿಂದ ಮಾಹಿತಿ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...