ನವದೆಹಲಿ: ಕೇಂದ್ರ ಸರ್ಕಾರದ ಬಜೆಟ್ ನಲ್ಲಿ ತೆರಿಗೆ ವಿನಾಯಿತಿ ಮಿತಿ ಹೆಚ್ಚಳ ಮಾಡುವ ಸಾಧ್ಯತೆ ಇದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಲಿರುವ ಬಜೆಟ್ ನಲ್ಲಿ ವೇತನದಾರರಿಗೆ ಸಿಹಿ ಸುದ್ದಿ ಸಿಗಲಿದೆ ಎಂದು ಹೇಳಲಾಗಿದೆ.
ಪ್ರಸ್ತುತ 50 ಸಾವಿರ ರೂ. ಸ್ಟಾಂಡರ್ಡ್ ಡಿಡಕ್ಷನ್ ತೆರಿಗೆ ವಿನಾಯಿತಿ ಮಿತಿ ಇದ್ದು, ಇದನ್ನು ಶೇಕಡ 30 ರಿಂದ 35 ರಷ್ಟು ಹೆಚ್ಚಳ ಮಾಡುವ ನಿರೀಕ್ಷೆ ಇದೆ. ಇದರಿಂದ ಲಕ್ಷಾಂತರ ಮಂದಿ ವೇತನದಾರರ ತೆರಿಗೆದಾರರಿಗೆ ಮತ್ತು ಪಿಂಚಣಿದಾರರಿಗೆ ಅನುಕೂಲವಾಗುತ್ತದೆ.
2019 ರಲ್ಲಿ ಸ್ಟ್ಯಾಂಡರ್ಡ್ ಡಿಡಕ್ಷನ್ ತೆರಿಗೆ ಮಿತಿಯನ್ನು 40ರಿಂದ 50 ಸಾವಿರ ರೂಪಾಯಿಗೆ ಹೆಚ್ಚಳ ಮಾಡಲಾಗಿತ್ತು. 2022 -23 ನೇ ಸಾಲಿನ ಬಜೆಟ್ ನಲ್ಲಿ ಇದನ್ನು ಶೇಕಡ 30 ರಿಂದ 35 ರಷ್ಟು ಹೆಚ್ಚಳ ಮಾಡಬಹುದು ಎಂದು ಹೇಳಲಾಗಿದೆ.