ಬೆಂಗಳೂರು: ರಾಜ್ಯದ ವಾಹನ ಮಾಲೀಕರು, ಸವಾರರಿಗೆ ಮುಖ್ಯ ಮಾಹಿತಿ ಇಲ್ಲಿದೆ. ಇನ್ನು ಮುಂದೆ ರಾಜ್ಯ ಹೆದ್ದಾರಿಗಳಲ್ಲೂ ಟೋಲ್ ಶುಲ್ಕ ಸಂಗ್ರಹಕ್ಕೆ ಕ್ರಮಕೈಗೊಳ್ಳಲಾಗಿದೆ.
ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ ರಾಜ್ಯದ 10 ಹೆದ್ದಾರಿಗಳಲ್ಲಿ ರಸ್ತೆ ಬಳಕೆದಾರರ ಶುಲ್ಕ ಸಂಗ್ರಹಿಸಲು ಏಜೆನ್ಸಿಗಳಿಂದ ಬಿಡ್ ಆಹ್ವಾನಿಸಿದೆ. ಇದರಿಂದಾಗಿ ಜನರ ಜೇಬಿಗೆ ಕತ್ತರಿ ಬೀಳಲಿದೆ. ಈಗಾಗಲೇ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ಶುಲ್ಕ ಪಾವತಿಸುವಲ್ಲಿ ಹೈರಾಣಾಗಿರುವ ವಾಹನ ಮಾಲೀಕರು, ಸವಾರರು ಇನ್ನು ಮುಂದೆ ರಾಜ್ಯ ಹೆದ್ದಾರಿಗಳಲ್ಲಿ ಟೋಲ್ ಶುಲ್ಕವನ್ನು ಪಾವತಿಸಬೇಕು.
ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ ನಿಯಮಿತದಿಂದ ಟೋಲ್ ಶುಲ್ಕ ಸಂಗ್ರಹಕ್ಕೆ ಕ್ರಮಕೈಗೊಳ್ಳಲಾಗಿದ್ದು ಏಜೆನ್ಸಿಗಳಿಂದ ಬಿಡ್ ಆಹ್ವಾನಿಸಲಾಗಿದೆ. ಇದಕ್ಕೆ ಹಲವೆಡೆ ತೀವ್ರ ವಿರೋಧ ವ್ಯಕ್ತವಾಗಿದೆ.