ಚಿಕ್ಕಬಳ್ಳಾಪುರ: 15 ಕೆಜಿ ಟೊಮೊಟೊ ಬಾಕ್ಸ್ ಗೆ ಕೇವಲ 10 ರೂ. ದರ ಇದ್ದು, ಇದರಿಂದ ಆಕ್ರೋಶಗೊಂಡ ರೈತರು ರಸ್ತೆಗೆ ಸುರಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
4 -5 ತಿಂಗಳ ಹಿಂದೆ 15 ಕೆಜಿ ಟೊಮೊಟೊ ಬಾಕ್ಸ್ ದರ 1000 ರೂ. ಗಡಿ ದಾಟಿತ್ತು. ಇದರಿಂದಾಗಿ ಗ್ರಾಹಕರು ಕಂಗಾಲಾಗಿದ್ದರು. ಈಗ ಟೊಮೆಟೊ ದರ ಪಾತಾಳಕ್ಕೆ ಕುಸಿದಿರುವುದರಿಂದ ಟೊಮೆಟೊ ಬೆಳೆಗಾರರು ತಲೆ ಮೇಲೆ ಕೈಹೊತ್ತುಕೊಳ್ಳುವಂತಾಗಿದೆ.
15 ಕೆಜಿ ಟೊಮೊಟೊ ಬಾಕ್ಸ್ ಕೇಬಲ್ 10 -15 ರೂಪಾಯಿಗೆ ಮಾರಾಟವಾಗುತ್ತಿದೆ. ಒಂದು ಕೆಜಿ ಟೊಮೆಟೊಗೆ ಒಂದು ರೂಪಾಯಿಗಿಂತಲೂ ಕಡಿಮೆ ದರ ಇದೆ. ಚಿಂತಾಮಣಿ ಮಾರುಕಟ್ಟೆಯಲ್ಲಿ ಟೊಮೆಟೊ ದರ ಭಾರಿ ಕುಸಿತವಾಗಿದ್ದರಿಂದ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಆರ್ಥಿಕ ಸಂಕಷ್ಟಕ್ಕೆ ಒಳಗಾದ ರೈತರಿಗೆ ಬೆಂಬಲ ಬೆಲೆ ಘೋಷಿಸುವಂತೆ ಒತ್ತಾಯಿಸಿ ರಸ್ತೆಗೆ ಟೊಮೆಟೊ ಸುರಿದು ಪ್ರತಿಭಟನೆ ನಡೆಸಿದ್ದಾರೆ. 15 ಕೆಜಿ ಟೊಮೆಟೊ ಬಾಕ್ಸ್ ಗೆ ಕನಿಷ್ಠ 500 ರೂಪಾಯಿ ದರ ನಿಗದಿ ಮಾಡಬೇಕು ಎಂದು ಬೆಳೆಗಾರರು ಒತ್ತಾಯಿಸಿದ್ದಾರೆ.