ಬೆಂಗಳೂರು: ತೈಲಬೆಲೆ ಏರಿಕೆ ಖಂಡಿಸಿ ರಾಜ್ಯದಲ್ಲಿ ಇಂದು ಲಾರಿ ಮಾಲೀಕರು ಮುಷ್ಕರ ಕೈಗೊಂಡಿದ್ದು, ಇಂದು ಬೆಳಿಗ್ಗೆಯಿಂದ ಸಂಜೆಯವರೆಗೂ ಲಾರಿಗಳು ರಸ್ತೆಗಿಳಿಯುವುದಿಲ್ಲ.
ರಾಜ್ಯ ಲಾರಿ ಮಾಲೀಕರ ಸಂಘದ ಅಧ್ಯಕ್ಷ ಷಣ್ಮುಗಪ್ಪ ಈ ಬಗ್ಗೆ ಹೇಳಿಕೆ ನೀಡಿದ್ದಾರೆ. ರಾಜ್ಯ ಸರ್ಕಾರ ವ್ಯಾಟ್ ಕಡಿಮೆಮಾಡಬೇಕು. ನೈಸ್ ರಸ್ತೆಯಲ್ಲಿ ಫಾಸ್ಟಾಗ್ ಗೆ ಅನುಮತಿ ಕೊಡಬೇಕು. ಅನಧಿಕೃತ ಟೋಲ್ ತೆರವುಗೊಳಿಸಬೇಕು. ಕೇಂದ್ರದ ಗುಜರಿ ನೀತಿ ಕೈಬಿಡಬೇಕು. ವಾಹನ ವಿಮೆ ಹೊರೆಯನ್ನು ಇಳಿಕೆ ಮಾಡಬೇಕು. ಇ -ವೇ ಬಿಲ್ ಹಿಂಪಡೆಯುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಲಾರಿ ಮುಷ್ಕರ ಕೈಗೊಳ್ಳಲಾಗಿದೆ.
ಬೇಡಿಕೆಗಳನ್ನು ಈಡೇರಿಸದಿದ್ದರೆ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಾಗುವುದು. ಮಾರ್ಚ್ 15 ರಿಂದ ಅನಿರ್ದಿಷ್ಟಾವಧಿ ಲಾರಿ ಮುಷ್ಕರ ನಡೆಸುವುದು ಎಂದು ರಾಜ್ಯ ಲಾರಿ ಮಾಲೀಕರ ಸಂಘದ ಅಧ್ಯಕ್ಷ ಷಣ್ಮುಗಪ್ಪ ತಿಳಿಸಿದ್ದಾರೆ.