alex Certify ತೈಲ ಬೆಲೆ ಏರಿದ್ರೂ ಕೈಕಟ್ಟಿ ಕುಳಿತ ಸರ್ಕಾರ: ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಲಾರಿ ಮಾಲೀಕರ ನಿರ್ಧಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತೈಲ ಬೆಲೆ ಏರಿದ್ರೂ ಕೈಕಟ್ಟಿ ಕುಳಿತ ಸರ್ಕಾರ: ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಲಾರಿ ಮಾಲೀಕರ ನಿರ್ಧಾರ

ಬೆಂಗಳೂರು: ತೈಲಬೆಲೆ ಏರಿಕೆ ಖಂಡಿಸಿ ರಾಜ್ಯದಲ್ಲಿ ಇಂದು ಲಾರಿ ಮಾಲೀಕರು ಮುಷ್ಕರ ಕೈಗೊಂಡಿದ್ದು, ಇಂದು ಬೆಳಿಗ್ಗೆಯಿಂದ ಸಂಜೆಯವರೆಗೂ ಲಾರಿಗಳು ರಸ್ತೆಗಿಳಿಯುವುದಿಲ್ಲ.

ರಾಜ್ಯ ಲಾರಿ ಮಾಲೀಕರ ಸಂಘದ ಅಧ್ಯಕ್ಷ ಷಣ್ಮುಗಪ್ಪ ಈ ಬಗ್ಗೆ ಹೇಳಿಕೆ ನೀಡಿದ್ದಾರೆ. ರಾಜ್ಯ ಸರ್ಕಾರ ವ್ಯಾಟ್ ಕಡಿಮೆಮಾಡಬೇಕು. ನೈಸ್ ರಸ್ತೆಯಲ್ಲಿ ಫಾಸ್ಟಾಗ್ ಗೆ ಅನುಮತಿ ಕೊಡಬೇಕು. ಅನಧಿಕೃತ ಟೋಲ್ ತೆರವುಗೊಳಿಸಬೇಕು. ಕೇಂದ್ರದ ಗುಜರಿ ನೀತಿ ಕೈಬಿಡಬೇಕು. ವಾಹನ ವಿಮೆ ಹೊರೆಯನ್ನು ಇಳಿಕೆ ಮಾಡಬೇಕು. ಇ -ವೇ ಬಿಲ್ ಹಿಂಪಡೆಯುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಲಾರಿ ಮುಷ್ಕರ ಕೈಗೊಳ್ಳಲಾಗಿದೆ.

ಬೇಡಿಕೆಗಳನ್ನು ಈಡೇರಿಸದಿದ್ದರೆ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಾಗುವುದು. ಮಾರ್ಚ್ 15 ರಿಂದ ಅನಿರ್ದಿಷ್ಟಾವಧಿ ಲಾರಿ ಮುಷ್ಕರ ನಡೆಸುವುದು ಎಂದು ರಾಜ್ಯ ಲಾರಿ ಮಾಲೀಕರ ಸಂಘದ ಅಧ್ಯಕ್ಷ ಷಣ್ಮುಗಪ್ಪ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...