ಬೆಂಗಳೂರು: ಟ್ವಿಟರ್ ಖಾತೆಗಳಿಗೆ ನಿರ್ಬಂಧ ವಿಧಿಸಿ ಕೇಂದ್ರ ಸರ್ಕಾರ ಹೊರಡಿಸಿದ ಆದೇಶ ಪ್ರಶ್ನಿಸಿ ಟ್ವಿಟರ್ ಸಂಸ್ಥೆಯಿಂದ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿದ್ದು, ತಕರಾರು ಅರ್ಜಿಯ ಸಂಬಂಧ ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್ ನಿಂದ ನೋಟಿಸ್ ಜಾರಿಗೊಳಿಸಲಾಗಿದೆ.
ಮಾಹಿತಿ ತಂತ್ರಜ್ಞಾನ ಕಾಯ್ದೆಗೆ ವಿರುದ್ಧವಾಗಿರುವ 1400 ಕ್ಕೂ ಅಧಿಕ ಟ್ವಿಟರ್ ಖಾತೆಗಳನ್ನು ಬ್ಲಾಕ್ ಮಾಡುವಂತೆ ಕೇಂದ್ರ ಸರ್ಕಾರ ಆದೇಶ ಹೊರಡಿಸಿದ್ದು, ಇದನ್ನು ಪ್ರಶ್ನಿಸಿ ಟ್ವಿಟರ್ ಸಂಸ್ಥೆ ಹೈಕೋರ್ಟ್ ಮೆಟ್ಟಿಲೇರಿದೆ. ಈ ಅರ್ಜಿಗೆ ಸಂಬಂಧಿಸಿದಂತೆ ಕೇಂದ್ರಕ್ಕೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.
ಆಕ್ಷೇಪಾರ್ಹ ಟ್ವಿಟರ್ ಪೋಸ್ಟ್ ತೆಗೆಯಲು ಕೇಂದ್ರ ಸರ್ಕಾರ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಸೂಚನೆಯನ್ನು ಪ್ರಶ್ನಿಸಿ ಟ್ವಿಟರ್ ನಿಂದ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿದೆ. ಕೇಂದ್ರ ಸರ್ಕಾರದ ನೋಟಿಸ್ ಅನ್ನು ಟ್ವಿಟರ್ ಸಂಸ್ಥೆ ಹೈಕೋರ್ಟ್ ನಲ್ಲಿ ಪ್ರಶ್ನಿಸಿದೆ. ಅಭಿವ್ಯಕ್ತಿ ಸ್ವಾತಂತ್ರ್ಯದ ಉಲ್ಲಂಘನೆ ಎಂದು ಹೈಕೋರ್ಟ್ ಮೊರೆ ಹೋಗಿದೆ.