alex Certify ವಾಹನ ಮಾಲೀಕರಿಗೆ ಮತ್ತೊಮ್ಮೆ ಗುಡ್ ನ್ಯೂಸ್: ಮೋಟಾರು ವಾಹನ ಕಾಯ್ದೆ ನಿಯಮ ಸಡಿಲ, ತೆರಿಗೆ ಪಾವತಿಗೆ ಮತ್ತೆ ಅವಧಿ ವಿಸ್ತರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಾಹನ ಮಾಲೀಕರಿಗೆ ಮತ್ತೊಮ್ಮೆ ಗುಡ್ ನ್ಯೂಸ್: ಮೋಟಾರು ವಾಹನ ಕಾಯ್ದೆ ನಿಯಮ ಸಡಿಲ, ತೆರಿಗೆ ಪಾವತಿಗೆ ಮತ್ತೆ ಅವಧಿ ವಿಸ್ತರಣೆ

ಬೆಂಗಳೂರು: ಕೋವಿಡ್ ಎರಡನೇ ಅಲೆಯ ಹಿನ್ನೆಲೆಯಲ್ಲಿ ವಾಣಿಜ್ಯ ಮತ್ತಿತರ ಚಟುವಟಿಕೆಗಳಿಗೆ ನಿರ್ಬಂಧಗಳನ್ನು ವಿಧಿಸಿರುವುದರಿಂದ ಇದೊಂದು ವಿಶೇಷ ಪ್ರಕರಣವೆಂದು ಪರಿಭಾವಿಸಿ ಕರ್ನಾಟಕ ಮೋಟಾರು ವಾಹನ ಕಾಯ್ದೆ 1957 ರ ಕಲಂ 4(1)ರ ನಿಯಮಗಳನ್ನು ಸಡಿಲಗೊಳಿಸಲಾಗಿದೆ.  ಮೋಟಾರು ವಾಹನ ತೆರಿಗೆಯನ್ನು ದಂಡ ರಹಿತವಾಗಿ  ಪಾವತಿಸಲು ಅವಧಿಯನ್ನು ದಿನಾಂಕ 15/7/2021 ರವರೆಗೆ ವಿಸ್ತರಿಸಿ ಆದೇಶಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಮತ್ತು ಸಾರಿಗೆ ಸಚಿವರಾದ ಲಕ್ಷ್ಮಣ ಸವದಿ ತಿಳಿಸಿದ್ದಾರೆ.

1.ಕರ್ನಾಟಕದ ಎಲ್ಲಾ ನೊಂದಾಯಿತ ಸಾರಿಗೆ ಪ್ರಯಾಣಿಕ ವಾಹನಗಳಿಗೆ(ಹೊಸ ವಾಹನಗಳ ನೊಂದಣಿಯನ್ನು ಹೊರತುಪಡಿಸಿ) ದಿನಾಂಕ 15/ 4/ 2021 ರ ಒಳಗಾಗಿ ಪಾವತಿಸಬೇಕಾಗಿದ್ದ ತೆರಿಗೆಯನ್ನು, ದಿನಾಂಕ 15/ 5 /2021, ರ ಒಳಗಾಗಿ ಪಾವತಿಸಬೇಕಾಗಿದ್ದ ತೆರಿಗೆಯನ್ನು ದಿನಾಂಕ 31/5/2021 ಮತ್ತು 30/6/2021 ರವರಿಗೆ ದಂಡ ರಹಿತವಾಗಿ ಪಾವತಿಸಲು ವಿಸ್ತರಿಸಿದ್ದ ಅವಧಿಯನ್ನು ದಿನಾಂಕ 15/ 7/ 2021 ರವರೆಗೆ ವಿಸ್ತರಿಸಲಾಗಿದೆ.

2.ಕರ್ನಾಟಕದ ಎಲ್ಲಾ ನೋಂದಾಯಿತ ಸರಕು ಸಾಗಾಣಿಕೆ ವಾಹನಗಳಿಗೆ( ಹೊಸ ವಾಹನಗಳ ನೋಂದಣಿಯನ್ನು ಹೊರತುಪಡಿಸಿ) ಸಂಬಂಧಿಸಿದಂತೆ ದಿನಾಂಕ 15 /5/ 2021 ಮತ್ತು 15/ 6 /2021 ರ ಒಳಗಾಗಿ ಪಾವತಿಸಬೇಕಾಗಿದ್ದ ತೆರಿಗೆಯನ್ನು ದಂಡ ರಹಿತವಾಗಿ ಪಾವತಿಸಲು ದಿನಾಂಕ 30/ 6/ 2021ರ ವರೆಗೆ ವಿಸ್ತರಿಸಿದ ಅವಧಿಯನ್ನು ದಿನಾಂಕ 15/ 7/ 2021 ರವರೆಗೆ ದಂಡ ರಹಿತವಾಗಿ ಪಾವತಿಸಲು ಅವಧಿಯನ್ನು ವಿಸ್ತರಿಸಲಾಗಿದೆ.  ಇದನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಡಿಸಿಎಂ ಸವದಿ ಅವರು ಮನವಿ ಮಾಡಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...