alex Certify ವಾಹನ ಖರೀದಿಸುವವರಿಗೆ ಗುಡ್ ನ್ಯೂಸ್: ಸಹಾಯಧನ ಸೌಲಭ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಾಹನ ಖರೀದಿಸುವವರಿಗೆ ಗುಡ್ ನ್ಯೂಸ್: ಸಹಾಯಧನ ಸೌಲಭ್ಯ

ಬಳ್ಳಾರಿ: ಸರಕು ಸಾಗಾಣಿಕೆ ವಾಹನ ಖರೀದಿಗೆ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಪರಿಶಿಷ್ಟ ವರ್ಗದವರ ವಿವಿಧ ಅಭಿವೃದ್ಧಿ ಕಾರ್ಯಕ್ರಮದಡಿ 2021-22ನೇ ಸಾಲಿನ ಬುಡಕಟ್ಟು ಉಪಯೋಜನೆಗೆ ವಿಶೇಷ ಕೇಂದ್ರಿಯ ನೆರವಿನಡಿ ಸರಕು ಸಾಗಾಣಿಕೆ ವಾಹನ ಖರೀದಿಸಲು ಸಹಾಯಧನ ನೀಡಲಾಗುವುದು.

ಬಳ್ಳಾರಿ ಜಿಲ್ಲೆಯ ಪರಿಶಿಷ್ಟ ವರ್ಗದ ಜನರಿಗೆ ಸೌಲಭ್ಯವನ್ನು ಒದಗಿಸಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳನ್ನು ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು/ಸಹಾಯಕ ನಿರ್ದೇಶಕರ ಕಚೇರಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಮತ್ತು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಧಿಕಾರಿಗಳ ಕಚೇರಿಯಿಂದ ಪಡೆಯಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಕಚೇರಿಯ ದೂ. 08392-242453 ಗೆ ಸಂಪರ್ಕಿಸಬಹುದು ಎಂದು ಬಳ್ಳಾರಿ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಧಿಕಾರಿ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...