ಬೆಂಗಳೂರು: ಖಾಸಗಿ ವಾಹನಗಳ ನೋಂದಣಿ ಫಲಕಗಳ ಮೇಲೆ ಸರ್ಕಾರದ ಲಾಂಛನ, ಸಂಘ, ಸಂಸ್ಥೆಗಳ ಹೆಸರು, ಚಿಹ್ನೆ ಮೊದಲಾದವುಗಳನ್ನು ಹಾಕಿದ್ದರೆ ಕೂಡಲೇ ತೆರವುಗೊಳಿಸುವಂತೆ ತಿಳಿಸಲಾಗಿದೆ.
ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಅವರು ಆದೇಶ ಹೊರಡಿಸಿದ್ದು, ಯಾವುದೇ ಖಾಸಗಿ ವಾಹನಗಳ ಮಾಲೀಕರು ತಮ್ಮ ವಾಹನಗಳ ಮೇಲೆ ಸರ್ಕಾರಿ ಲಾಂಛನ ಹೆಸರುಗಳನ್ನು ಅಳವಡಿಸಲು ಕೇಂದ್ರ ಸರ್ಕಾರದ ಅನುಮತಿ ಪಡೆದುಕೊಳ್ಳಬೇಕಿದೆ ಎಂದು ತಿಳಿಸಿದ್ದಾರೆ.
ಖಾಸಗಿ ವಾಹನ ನೋಂದಣಿ ಫಲಕಗಳ ಮೇಲೆ ಸರ್ಕಾರ ಲಾಂಛನ ಸಂಘ-ಸಂಸ್ಥೆಗಳ ಮೊದಲಾದವುಗಳನ್ನು ತೆರವುಗೊಳಿಸುವ ಕುರಿತಂತೆ ಪೊಲೀಸರು ಮತ್ತು ಸಾರಿಗೆ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕೆಂದು ತಿಳಿಸಲಾಗಿದೆ. ನಿಗಮ, ಮಂಡಳಿ ಸಂಸ್ಥೆಗಳಿಗೆ ಪತ್ರ ಬರೆದು ಅವರ ವಾಹನ ನೋಂದಣಿ ಫಲಕದ ಮೇಲೆ ಅನಧಿಕೃತವಾಗಿ ಅಳವಡಿಸಿದ ಎಲ್ಲಾ ಸರ್ಕಾರಿ ಲಾಂಛನಗಳನ್ನು ತೆರವುಗೊಳಿಸಬೇಕು. ತೆರವುಗೊಳಿಸದಿದ್ದರೆ ಸಂಬಂಧಿಸಿದ ಸಂಸ್ಥೆಯ ಮುಖ್ಯಸ್ಥರ ವಿರುದ್ಧ ನ್ಯಾಯಾಂಗ ನಿಂದನೆ ಕ್ರಮಕ್ಕೆ ಶಿಫಾರಸು ಮಾಡುವುದಾಗಿ ಎಚ್ಚರಿಕೆ ನೀಡಲಾಗಿದೆ.