ಬೆಂಗಳೂರು: ಪ್ರಯಾಣಿಕ ವಾಹನಗಳಿಗೆ ಮೇ ತಿಂಗಳ ತೆರಿಗೆ ವಿನಾಯಿತಿ ನೀಡಲಾಗುವುದು ಎಂದು ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವರಾದ ಲಕ್ಷ್ಮಣ ಸವದಿ ತಿಳಿಸಿದ್ದಾರೆ.
ಸೆಮಿ ಲಾಕ್ಡೌನ್ ಜಾರಿಯಾದ ಹಿನ್ನೆಲೆಯಲ್ಲಿ ಪ್ರಯಾಣಿಕರ ವಾಹನಗಳ ಸಂಚಾರಕ್ಕೆ ಸರ್ಕಾರ ನಿರ್ಬಂಧ ಹೇರಿದೆ. ಹೀಗಾಗಿ ಅಂತಹ ವಾಹನಗಳಿಗೆ ಮೇ ತಿಂಗಳಿಗೆ ಅನ್ವಯವಾಗುವಂತೆ ವಾಹನ ತೆರಿಗೆ ವಿನಾಯಿತಿ ನೀಡಲಾಗಿದೆ.
ಲಾಕ್ ಡೌನ್ ನಿರ್ಬಂಧ ಕಾರಣ ವಾಹನ ಮಾಲೀಕರು ತೆರಿಗೆವಿನಾಯಿತಿ ಮಾಡುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದು, ಅವರ ಮನವಿ ಪರಿಗಣಿಸಿ ಕರ್ನಾಟಕ ಮೋಟಾರು ವಾಹನ ತೆರಿಗೆ ಕಾಯ್ದೆಯಡಿ ರಾಜ್ಯದಲ್ಲಿ ನೋಂದಾಯಿಸಿದ(ಹೊಸ ವಾಹನ ಹೊರತುಪಡಿಸಿ) ಎಲ್ಲಾ ಸಾರಿಗೆ ಪ್ರಯಾಣಿಕ ವಾಹನಗಳಿಗೆ ಅನ್ವಯವಾಗುವಂತೆ ಮೇ ತಿಂಗಳಿಗೆ ಮಾತ್ರ ವಾಹನ ತೆರಿಗೆ ಪಾವತಿಯಿಂದ ವಿನಾಯಿತಿ ನೀಡಲಾಗಿದೆ ಎಂದು ಹೇಳಲಾಗಿದೆ.