ನವದೆಹಲಿ: ತೆರಿಗೆಗೆ ಸಂಬಂಧಿಸಿದ ವ್ಯಾಜ್ಯಗಳನ್ನು ಇತ್ಯರ್ಥ ಪಡಿಸಿಕೊಳ್ಳುವ ವಿವಾದ್ ಸೆ ವಿಶ್ವಾಸ್ ಯೋಜನೆಯ ಗಡುವನ್ನು ಸೆಪ್ಟೆಂಬರ್ 30ರ ವರೆಗೆ ವಿಸ್ತರಿಸಲಾಗಿದೆ.
ಕೇಂದ್ರ ಸರ್ಕಾರ ವಿವಾದ್ ಸೆ ವಿಶ್ವಾಸ್ ಯೋಜನೆ ಅಡಿಯಲ್ಲಿ ನೇರ ತೆರಿಗೆಗೆ ಸಂಬಂಧಿಸಿದ ವ್ಯಾಜ್ಯಗಳನ್ನು ಪರಿಹರಿಸಿಕೊಳ್ಳಲು ಅವಕಾಶ ಕಲ್ಪಿಸಿದೆ. ತೆರಿಗೆ ಪಾವತಿಗೆ ಸಂಬಂಧಿಸಿದ ಅರ್ಜಿ ಸಂಖ್ಯೆ 3 ರ ವಿತರಣೆ ಮತ್ತು ತಿದ್ದುಪಡಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಗಣಿಸಿ ಹೆಚ್ಚುವರಿ ಹಣವಿಲ್ಲದೆ ಸೆಪ್ಟೆಂಬರ್ 30ರ ವರೆಗೆ ತೆರಿಗೆ ವ್ಯಾಜ್ಯಗಳ ಇತ್ಯರ್ಥಕ್ಕೆ ಕೇಂದ್ರ ಹಣಕಾಸು ಸಚಿವಾಲಯದಿಂದ ಅವಕಾಶ ಕಲ್ಪಿಸಲಾಗಿದೆ.
ವಿವಾದ್ ಸೆ ವಿಶ್ವಾಸ್ ಯೋಜನೆಯಡಿ ತೆರಿಗೆಯ ವ್ಯಾಜ್ಯ ಇತ್ಯರ್ಥಪಡಿಸಿಕೊಳ್ಳಲು ಆಗಸ್ಟ್ 31 ರ ವರೆಗೆ ಗಡುವು ವಿಸ್ತರಣೆ ಮಾಡಲಾಗಿತ್ತು. ಹೆಚ್ಚುವರಿ ಬಡ್ಡಿಯೊಂದಿಗೆ ಅಕ್ಟೋಬರ್ 31 ರ ವರೆಗೆ ಅವಕಾಶ ನೀಡಲಾಗಿದೆ.