ನವದೆಹಲಿ: ಅತಿಸಣ್ಣ, ಸಣ್ಣ ಮತ್ತು ಮಧ್ಯಮ ಪ್ರಮಾಣದ -ಎಂಎಸ್ಎಂಇ ಉದ್ಯಮದ ವ್ಯಾಪ್ತಿಗೆ ಚಿಲ್ಲರೆ ಮತ್ತು ಸಗಟು ವ್ಯಾಪಾರಿ ವಲಯಗಳನ್ನೂ ಸೇರ್ಪಡೆ ಮಾಡಲಾಗಿದೆ.
ಕೇಂದ್ರ ಸಚಿವ ನಿತಿನ್ ಗಡ್ಕರಿ ಈ ಬಗ್ಗೆ ಮಾಹಿತಿ ನೀಡಿದ್ದು, ಎಂಎಸಿಎಂಎ ವ್ಯಾಪ್ತಿಗೆ ಸಗಟು ಮತ್ತು ಚಿಲ್ಲರೆ ವ್ಯಾಪಾರ ತರಲಾಗಿದ್ದು, ಸಗಟು ಮತ್ತು ಚಿಲ್ಲರೆ ವ್ಯಾಪಾರ ವಲಯದವರಿಗೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಮಾರ್ಗಸೂಚಿಯನ್ವಯ ಆದ್ಯತೆಯ ಮೇರೆಗೆ ಸಾಲ ಸೌಲಭ್ಯ ಸಿಗಲಿದೆ ಎಂದು ಹೇಳಿದ್ದಾರೆ.
ಚಿಲ್ಲರೆ ಮತ್ತು ಸಗಟು ವ್ಯಾಪಾರ ವಲಯಗಳನ್ನು ಎಂಎಸ್ಎಂಇ ಯಿಂದ ಹೊರಗಿಡಲಾಗಿತ್ತು. ಈಗ ಪರಿಷ್ಕೃತ ಮಾರ್ಗಸೂಚಿಯ ಪ್ರಕಾರ ಇವೆರಡೂ ವಲಯವನ್ನು ಸೇರ್ಪಡೆ ಮಾಡಲಾಗಿದೆ. ಈ ವಲಯದ ಸುಮಾರು 2.5 ಕೋಟಿ ವರ್ತಕರಿಗೆ ಅನುಕೂಲವಾಗಲಿದ್ದು, ಉದ್ಯಮ್ ಪೋರ್ಟಲ್ ನಲ್ಲಿ ನೋಂದಾಯಿಸಿಕೊಳ್ಳಲು ಸಾಧ್ಯವಾಗಲಿದೆ ಎಂದು ಹೇಳಲಾಗಿದೆ.