ನವದೆಹಲಿ: ಪ್ರಮುಖ ಸಾಫ್ಟ್ ವೇರ್ ಕಂಪನಿಗಳಲ್ಲಿ ಒಂದಾದ ವಿಪ್ರೊ 30,000 ಮಂದಿ ಹೊಸಬರನ್ನು ನೇಮಕ ಮಾಡಿಕೊಳ್ಳಲಿದೆ.
ಮಾಹಿತಿ ತಂತ್ರಜ್ಞಾನದ ಬೇಡಿಕೆ ಹೆಚ್ಚಾಗಿದ್ದು, ಹೊಸಬರಿಗೆ ಉದ್ಯೋಗವಕಾಶಗಳು ಸೃಷ್ಟಿಯಾಗುತ್ತಿವೆ. 2021 – 22 ನೇ ಸಾಲಿನಲ್ಲಿ 17,500 ಮಂದಿ ಹೊಸಬರನ್ನು ನೇಮಕ ಮಾಡಿಕೊಳ್ಳಲಾಗಿತ್ತು. ಪ್ರಸಕ್ತ ಸಾಲಿನಲ್ಲಿ 30,000 ಪ್ರೆಶರ್ ಗಳನ್ನು ನೇಮಕಾತಿ ಮಾಡಿಕೊಳ್ಳಲು ನಿರ್ಧರಿಸಲಾಗಿದೆ ಎಂದು ವಿಪ್ರೋ ಕಂಪನಿಯ ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥ ಸೌರಭ್ ಗೋವಿಲ್ ಮಾಹಿತಿ ನೀಡಿದ್ದಾರೆ.
ಕಳೆದ 12 ತಿಂಗಳಲ್ಲಿ ವಿಪ್ರೋ ಶೇಕಡ 80 ರಷ್ಟು ಉದ್ಯೋಗಿಗಳಿಗೆ ಮೂರು ಸಲ ಬಡ್ತಿ, ವೇತನ ಪರಿಷ್ಕರಣೆ ಮಾಡಿದೆ. ಪ್ರತಿ ನಾಲ್ಕು ತಿಂಗಳಿಗೊಮ್ಮೆ ಬಡ್ತಿ ನೀಡಲಾಗುತ್ತಿದೆ. 2021 -22 ಮೂರನೇ ತ್ರೈಮಾಸಿಕದಲ್ಲಿ 2969 ಕೋಟಿ ರೂಪಾಯಿ ನಿವ್ವಳ ಲಾಭ ಗಳಿಸಿದೆ ಎನ್ನಲಾಗಿದೆ.