ಮಡಿಕೇರಿ: ಸ್ವಾತಂತ್ರ್ಯದ ಅಮೃತ ಮಹೋತ್ಸವದಂದು ಮುಖ್ಯಮಂತ್ರಿಯವರು ಘೋಷಣೆ ಮಾಡಿದ 13 ಅಮೃತ ಯೋಜನೆಗಳ ಪೈಕಿ ಸ್ತ್ರೀಶಕ್ತಿ ಗುಂಪುಗಳನ್ನು ಕಿರು ಉದ್ದಿಮೆಗಳನ್ನಾಗಿ ಪರಿವರ್ತಿಸುವ ದೃಷ್ಟಿಯಿಂದ ಪ್ರತಿ ಗುಂಪಿಗೆ 1 ಲಕ್ಷ ರೂ.ಗಳಂತೆ ಬಂಡವಾಳ ನಿಧಿ ನೀಡುವ ಅಮೃತ ಸ್ವಸಹಾಯ ಕಿರು ಉದ್ದಿಮೆಗಳ ಯೋಜನೆಗೆ ಆಡಳಿತಾತ್ಮಕ ಅನುಮೋದನೆ ನೀಡಿದೆ.
ಅದರಂತೆ ಕೊಡಗು ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ 60 ಮಹಿಳಾ ಸ್ತ್ರೀಶಕ್ತಿ ಗುಂಪುಗಳನ್ನು ಕಿರು ಉದ್ದಿಮೆಗಳನ್ನಾಗಿ ಪರಿವರ್ತಿಸಲು ಗುರಿ ನೀಡಿದ್ದು, ಅರ್ಹ ಸ್ತ್ರೀಶಕ್ತಿ ಗುಂಪುಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಸ್ತ್ರೀಶಕ್ತಿ ಗುಂಪುಗಳು ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದಡಿ(ಜಿ.ಪಿ.ಎಲ್.ಎಫ್.) ನೋಂದಾಯಿಸಿರಬೇಕು. ಮತ್ತು ಸಮುದಾಯ ಬಂಡವಾಳ ನಿಧಿ (ಸಿ.ಐ.ಎಫ್.)ಪಡೆದಿರಬೇಕು. ಹಾಗೂ ಇನ್ನಿತರೆ ಮಾನದಂಡ ನಿಗದಿಪಡಿಸಿದಲಾಗಿದೆ.
ಕಿರು ಉದ್ದಿಮೆ ಸ್ಥಾಪನೆ ಸಂಬಂಧ ಅರ್ಜಿ ಸಲ್ಲಿಸಲು ಸೆಪ್ಟೆಂಬರ್, 25 ಕೊನೆಯ ದಿನವಾಗಿದೆ. ಕಿರು ಉದ್ದಿಮೆ ಸ್ಥಾಪಿಸಲು ಆಸಕ್ತಿ ಹೊಂದಿರುವ ಸ್ತ್ರೀಶಕ್ತಿ ಗುಂಪುಗಳು ಹೆಚ್ಚಿನ ಮಾಹಿತಿಗೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಮಡಿಕೇರಿ (9342152807) ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಸೋಮವಾರಪೇಟೆ (08276 282281), ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಪೊನ್ನಂಪೇಟೆ (08274 249010), ಉಪ ನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಡಿಕೇರಿ (8088063196, 08272 298379) ಇವರನ್ನು ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.