ಬೆಂಗಳೂರು: ಸ್ವಸಹಾಯ ಗುಂಪುಗಳ ಸದಸ್ಯರ ಆದಾಯ ವೃದ್ಧಿಗೆ ಸರ್ಕಾರ ಯೋಜನೆ ರೂಪಿಸಿದ್ದು, ಮಹಿಳೆಯರಿಗೆ ಆರ್ಥಿಕ ರಕ್ಷಣೆ ನೀಡಲು ಕ್ರಮ ಕೈಗೊಂಡಿದೆ.
ಜೀವನೋಪಾಯ ಅಭಿಯಾನದ ಮೂಲಕ ಗ್ರಾಮೀಣ ಮತ್ತು ನಗರ ಪ್ರದೇಶದ ಮಹಿಳೆಯರ ಆರ್ಥಿಕ ಸ್ಥಿತಿಗತಿ ಸುಧಾರಿಸಲು ಕ್ರಮ ಕೈಗೊಳ್ಳಲಾಗಿದೆ. ಮಾಸಿಕ 3 ರಿಂದ 10 ಸಾವಿರ ರೂ.ಗೆ ಆದಾಯ ಹೆಚ್ಚಿಸಲು ಕ್ರಮ ಕೈಗೊಳ್ಳಲಾಗಿದೆ.
ಮಸಾಲೆ ಪದಾರ್ಥ, ತೋರಣ, ಅಲಂಕಾರಿಕ ವಸ್ತುಗಳು, ತಿಂಡಿ ಪದಾರ್ಥಗಳು, ಚಟ್ನಿಪುಡಿ, ಸೆಣಬಿನ ಚೀಲ ಮೊದಲಾದ ಉತ್ಪನ್ನಗಳನ್ನು ಇ –ಕಾಮರ್ಸ್ ವೇದಿಕೆಗಳಲ್ಲಿ ಮಾರುಕಟ್ಟೆ ಒದಗಿಸಲಾಗುತ್ತದೆ. ಗ್ರಾಮೀಣ ಭಾಗದಲ್ಲಿ ಕೃಷಿ ಮತ್ತು ಕೃಷಿಯೇತರ ಚಟುವಟಿಕೆಗಳಿಗೆ ನೆರವು ನೀಡಲಾಗುತ್ತದೆ. ಸ್ವಸಹಾಯ ಗುಂಪುಗಳ ಸದಸ್ಯರಿಗೆ ತರಬೇತಿ ಜೊತೆಗೆ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸುವ ಮೂಲಕ ಆದಾಯ ಹೆಚ್ಚಳಕ್ಕೆ ಕ್ರಮಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.