ಚಾಮರಾಜನಗರ: ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ದಿ ನಿಗಮದಿಂದ 2020-21ನೇ ಸಾಲಿನ ಕಿರುಸಾಲ ಯೋಜನೆಯಡಿ ಬಡ್ಡಿ ರಹಿತ ಸಾಲ ನೀಡುವ ಸಲುವಾಗಿ ಸ್ತ್ರೀಶಕ್ತಿ ಸಂಘಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಪ್ರತೀ ಸ್ತ್ರೀ ಶಕ್ತಿ ಗುಂಪುಗೆ 2 ಲಕ್ಷ ರೂ ವರೆಗೆ ಬಡ್ಡಿರಹಿತ ಸಾಲ ನೀಡಲಾಗುತ್ತದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ತಾಲೂಕು ಮಟ್ಟದ ಒಕ್ಕೂಟದಲ್ಲಿ ಸ್ತ್ರೀ ಶಕ್ತಿ ಸಂಘಗಳು ನೋಂದಣಿಯಾಗಿರಬೇಕು, ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆಯನ್ನು ಹೊಂದಿರಬೇಕು, ಈಗಾಗಲೇ ಕಿರುಸಾಲ ಪಡೆದಿರುವ ಸಂಘಗಳು ಅರ್ಜಿ ಸಲ್ಲಿಸುವಂತಿಲ್ಲ, ಅರ್ಜಿಗಳನ್ನು ಆಯಾ ತಾಲೂಕಿನ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿಯಿಂದ ಉಚಿತವಾಗಿ ಪಡೆದು ಅಗತ್ಯ ದಾಖಾಲಾತಿಗಳೊಂದಿಗೆ ಫೆಬ್ರವರಿ 10 ರೊಳಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿ ಚಾಮರಾಜನಗರ ದೂ.ಸಂ 08226-222603, ಕೊಳ್ಳೇಗಾಲ ದೂ.ಸಂ 08224-252367, ಗುಂಡ್ಲುಪೇಟೆ ದೂ.ಸಂ 08229-222286 ಹಾಗೂ ಯಳಂದೂರು ದೂ.ಸಂ 08226-240224 ರವರನ್ನು ಸಂಪರ್ಕಿಸುವಂತೆ ಮಹಿಳಾ ಮತ್ತು ಅಭಿವೃದ್ದಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.