ನವದೆಹಲಿ: ಕೊರೋನಾ ಬಿಕ್ಕಟ್ಟಿನ ಹಿನ್ನಲೆಯಲ್ಲಿ ಆರ್ಥಿಕ ಹರಿವು ಬೆಂಬಲಕ್ಕೆ ಮಹತ್ವದ ಒಪ್ಪಂದ ಮಾಡಿಕೊಳ್ಳಲಾಗಿದೆ. ವಿಶ್ವಬ್ಯಾಂಕ್ ಮತ್ತು ಭಾರತ ಸರ್ಕಾರದ ನಡುವೆ ಒಪ್ಪಂದ ಮಾಡಿಕೊಳ್ಳಲಾಗಿದ್ದು, ಹಣಕಾಸು ಒಪ್ಪಂದಕ್ಕೆ ಭಾರತ ಸಹಿ ಹಾಕಿದೆ.
750 ಮಿಲಿಯನ್ ಡಾಲರ್ ಒಪ್ಪಂದಕ್ಕೆ ಭಾರತ ಸಹಿ ಹಾಕಿದ್ದು ಎಂಎಸ್ಎಂಇ ಉದ್ಯಮದಲ್ಲಿ ಹಣಕಾಸು ಹರಿವು ಹೆಚ್ಚಿಸುವುದು ಈ ಒಪ್ಪಂದದ ಉದ್ದೇಶವಾಗಿದೆ.
ಕೊರೋನಾ ಸೋಂಕು ತಡೆಗೆ ಲಾಕ್ ಡೌನ್ ಜಾರಿ ಮಾಡಿದ ಪರಿಣಾಮ ದೇಶದ ಆರ್ಥಿಕತೆಗೆ ಭಾರೀ ಪೆಟ್ಟು ಬಿದ್ದಿದೆ. ಲಾಕ್ ಡೌನ್ ಸಡಿಲಿಕೆ ಮಾಡಿ ಆರ್ಥಿಕತೆಗೆ ಚೇತರಿಕೆ ನೀಡಿದ್ದು, ಸಣ್ಣ, ಅತಿಸಣ್ಣ, ಮಧ್ಯಮ ಕೈಗಾರಿಕೆಗಳಿಗೆ ಹೆಚ್ಚಿನ ನೆರವು ನೀಡಲು ಕ್ರಮ ಕೈಗೊಳ್ಳಲಾಗಿದೆ.
ಇದೇ ಸಂದರ್ಭದಲ್ಲಿ ಕೊರೋನಾ ಬಿಕ್ಕಟ್ಟಿನಿಂದ ಸಂಕಷ್ಟದಲ್ಲಿರುವ ಎಂಎಸ್ಎಂಇಗಳಿಗೆ ಹಣಕಾಸು ಹರಿವು ಹೆಚ್ಚಿಸುವ ಉದ್ದೇಶದಿಂದ ವಿಶ್ವಸಂಸ್ಥೆಯೊಂದಿಗೆ ಮಹತ್ವದ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ಹೇಳಲಾಗಿದೆ.