alex Certify BIG BREAKING: ರಾಜ್ಯದ ರೈತರಿಗೆ ಗುಡ್ ನ್ಯೂಸ್; ಏ. 1 ರಿಂದಲೇ ಯಶಸ್ವಿನಿ ಯೋಜನೆ ಜಾರಿ, ಕೇಂದ್ರ ಸಚಿವ ಅಮಿತ್ ಶಾ ಚಾಲನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ರಾಜ್ಯದ ರೈತರಿಗೆ ಗುಡ್ ನ್ಯೂಸ್; ಏ. 1 ರಿಂದಲೇ ಯಶಸ್ವಿನಿ ಯೋಜನೆ ಜಾರಿ, ಕೇಂದ್ರ ಸಚಿವ ಅಮಿತ್ ಶಾ ಚಾಲನೆ

ಬೆಂಗಳೂರು: ರಾಜ್ಯದಲ್ಲಿ ಯಶಸ್ವಿನಿ ಯೋಜನೆಯನ್ನು ಪರಿಷ್ಕರಿಸಿ ಮರು ಜಾರಿಗೆ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ.

ಭಾರಿ ಒತ್ತಾಯದ ಹಿನ್ನಲೆಯಲ್ಲಿ ರಾಜ್ಯದಲ್ಲಿ ಯಶಸ್ವಿನಿ ಯೋಜನೆ ಮರು ಜಾರಿಗೆ ಸರ್ಕಾರ ಆದೇಶ ಹೊರಡಿಸಿದೆ. 2022 -23 ನೇ ಸಾಲಿನ ರಾಜ್ಯ ಬಜೆಟ್ನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಘೋಷಿಸಿದಂತೆ ಏಪ್ರಿಲ್ 1 ರಂದು ಯಶಸ್ವಿನಿ ಯೋಜನೆ ಮರು ಜಾರಿಗೆ ಚಾಲನೆ ನೀಡಲಾಗುತ್ತದೆ. ಕೇಂದ್ರ ಸಹಕಾರ ಸಚಿವರಾದ ಅಮಿತ್ ಶಾ ಅವರು ರಾಜ್ಯದಲ್ಲಿ ಯಶಸ್ವಿನಿ ಯೋಜನೆ ಮರು ಜಾರಿಗೆ ಚಾಲನೆ ನೀಡಲಿದ್ದಾರೆ.

ಎಸ್.ಎಂ. ಕೃಷ್ಣ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಜಾರಿಗೆ ತರಲಾಗಿದ್ದ ಈ ಯೋಜನೆಯಿಂದ ರೈತರು, ಗ್ರಾಮೀಣ ಪ್ರದೇಶದ ಬಡವರಿಗೆ ಅನುಕೂಲವಾಗಿತ್ತು. ನಂತರದಲ್ಲಿ ಆಯುಷ್ಮಾನ್ ಯೋಜನೆ ಜಾರಿಯಾಗಿದ್ದರಿಂದ ಯಶಸ್ವಿನಿ ಯೋಜನೆ ಸ್ಥಗಿತಗೊಂಡಿತ್ತು. ಈಗ ಮತ್ತೆ ಜಾರಿಗೊಳಿಸಲಾಗುತ್ತಿದೆ ಎಂದು ಹೇಳಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...