ಮೈಸೂರು: ಎಸ್.ಎಂ. ಕೃಷ್ಣ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಜಾರಿಗೆ ತಂದಿದ್ದ ಜನಪ್ರಿಯ ಯಶಸ್ವಿನಿ ಆರೋಗ್ಯ ವಿಮೆ ಯೋಜನೆಯನ್ನು ಸರ್ಕಾರ ಮರು ಜಾರಿಗೊಳಿಸುವ ಸಾಧ್ಯತೆ ಇದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ದಸರಾ ಉದ್ಘಾಟನೆ ಸಮಾರಂಭದಲ್ಲಿ ಮಾತನಾಡಿ, ರೈತರಿಗೆ ಸುಲಭವಾಗಿ ಉಚಿತವಾಗಿ ಚಿಕಿತ್ಸೆ ಸೌಲಭ್ಯಗಳು ಸಿಗಬೇಕು ಎಂಬ ಉದ್ದೇಶದಿಂದ ಎಸ್.ಎಂ. ಕೃಷ್ಣ ಅವಧಿಯಲ್ಲಿ ಯಶಸ್ವಿನಿ ಯೋಜನೆಯನ್ನು ಜಾರಿಗೆ ತರಲಾಗಿತ್ತು. ಈ ಯೋಜನೆಯನ್ನು ಮರು ಜಾರಿಗೊಳಿಸುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ ಎಂದು ತಿಳಿಸಿದ್ದಾರೆ.
ರೈತರು ಸಹಕಾರಿಗಳ ಆರೋಗ್ಯ ಸುರಕ್ಷಿತ ಯೋಜನೆ ಇದಾಗಿದ್ದು, ಯಾವುದೇ ಸಹಕಾರ ಸಂಘದ ಸದಸ್ಯರು ಕನಿಷ್ಠ ಪ್ರೀಮಿಯಂ ಮೊತ್ತವನ್ನು ಪಾವತಿಸುವ ಮೂಲಕ ತಮ್ಮ ಕುಟುಂಬದವರ ಹೆಸರು ನೋಂದಾಯಿಸಿಕೊಂಡು ಚಿಕಿತ್ಸೆ ಸೌಲಭ್ಯ ಪಡೆಯಬಹುದಾಗಿದೆ.