ಬೆಂಗಳೂರು: ಮಹತ್ವಾಕಾಂಕ್ಷಿ ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆ ನೋಂದಣಿ ಅವಧಿಯನ್ನು ಮಾರ್ಚ್ 31 ರವರೆಗೆ ವಿಸ್ತರಿಸಲಾಗಿದೆ.
ರಾಜ್ಯ ಸರ್ಕಾರದ ಮಹತ್ವಕಾಂಕ್ಷಿಯ ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆ ಜಾರಿ ಮತ್ತು ಹೊಸ ಸದಸ್ಯರ ನೋಂದಣಿ ಅವಧಿ ಮಾರ್ಚ್ 31 ರವರೆಗೆ ವಿಸ್ತರಣೆ ಮಾಡಿ ಆದೇಶ ಹೊರಡಿಸಲಾಗಿದೆ. ಗ್ರಾಮಾಂತರ ಪ್ರದೇಶಗಳಲ್ಲಿ ಹೆಚ್ಚಿನ ಜನ ಯೋಜನೆಗೆ ನೋಂದಾಯಿಸಿಕೊಳ್ಳತೊಡಗಿದ್ದಾರೆ. ಹೀಗಾಗಿ ಅವಧಿ ವಿಸ್ತರಿಸಬೇಕೆಂದು ಪ್ರಸ್ತಾವನೆ ಸಲ್ಲಿಸಲಾಗಿದ್ದು, ಇದನ್ನು ಪರಿಗಣಿಸಿ ನೋಂದಣಿ ಅವಧಿಯನ್ನು ವಿಸ್ತರಿಸಲಾಗಿದೆ.
ಸಹಕಾರ ಸಂಘಗಳ ಸದಸ್ಯರ ಅನುಕೂಲಕ್ಕೆ ಯೋಜನೆ ಜಾರಿಗೊಳಿಸಿದ್ದು, ಡಿಸೆಂಬರ್ 31 ವರೆಗೆ ಇದ್ದ ಅವಧಿಯನ್ನು ಈ ಹಿಂದೆ ಎರಡು ಬಾರಿ ವಿಸ್ತರಿಸಲಾಗಿತ್ತು. ಫೆಬ್ರವರಿ 28 ನೋಂದಣಿಗೆ ಕೊನೆಯ ದಿನವಾಗಿದ್ದು, ಇದುವರೆಗೆ 34.52 ಲಕ್ಷ ಸದಸ್ಯರು ನೋಂದಾಯಿಸಿಕೊಂಡಿದ್ದಾರೆ. ನೋಂದಣಿಯಲ್ಲಿ ಗುರಿ ಮೀರಿ ಸಾಧನೆ ಮಾಡಲಾಗಿದೆ.