ಮೈಸೂರು: ರಾಜ್ಯದಲ್ಲಿ ರೈತರಿಗೆ ಆರೋಗ್ಯ ಭದ್ರತೆ ಒದಗಿಸಿದ್ದ ಯಶಸ್ವಿನಿ ಯೋಜನೆಯನ್ನು ಮತ್ತೆ ಜಾರಿಗೊಳಿಸುವ ಕುರಿತು ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆದಿದೆ.
ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಈ ಬಗ್ಗೆ ಮಾಹಿತಿ ನೀಡಿ, ಯಶಸ್ವಿನಿ ಯೋಜನೆ ಜಾರಿಗೆ ಚಿಂತನೆ ನಡೆಸಲಾಗಿದೆ ಎಂದು ತಿಳಿಸಿದ್ದಾರೆ.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೊಂದಿಗೆ ಯಶಸ್ವಿನಿ ಯೋಜನೆ ಜಾರಿ ಕುರಿತಾಗಿ ಚರ್ಚೆ ನಡೆಸಿದ್ದು, ಇದಕ್ಕೆ ಅಗತ್ಯವಾದ 400 ಕೋಟಿ ರೂ. ಅನುದಾನವನ್ನು ಸಹಕಾರ ಇಲಾಖೆಯಿಂದ ನೀಡಲಾಗುವುದು ಎಂದು ಹೇಳಿದ್ದಾರೆ.
ಹಿಂದಿನ ಸರ್ಕಾರದ ಅವಧಿಯಲ್ಲಿ ಯಶಸ್ವಿನಿ ಯೋಜನೆ ರದ್ದುಪಡಿಸಿ ಆರೋಗ್ಯ ಕರ್ನಾಟಕ ಆಯುಷ್ಮಾನ್ ಭಾರತ ಯೋಜನೆಗೆ ಸೇರ್ಪಡೆ ಮಾಡಲಾಗಿತ್ತು. ರೈತರು, ಜನಸಾಮಾನ್ಯರಿಂದ ಯಶಸ್ವಿನಿ ಯೋಜನೆ ಜಾರಿಗೆ ಬೇಡಿಕೆ ಹೆಚ್ಚಾದ ಹಿನ್ನೆಲೆಯಲ್ಲಿ ಮರು ಜಾರಿಗೆ ಚಿಂತನೆ ನಡೆದಿದೆ ಎಂದು ಹೇಳಲಾಗಿದೆ.