ಆಧಾರ್ ಕಾರ್ಡ್ ಗುರುತಿನ ಪ್ರಮುಖ ದಾಖಲೆಯಾಗಿದೆ. ಯುನಿಕ್ ಐಡೆಂಟಿಫಿಕೇಶನ್ ಅಥಾರಿಟಿ ಆಫ್ ಇಂಡಿಯಾ ಇದನ್ನು ನಿರಂತರವಾಗಿ ನವೀಕರಿಸುತ್ತಿದೆ. ನವೀಕರಣದ ಪ್ರಕ್ರಿಯೆಯನ್ನು ಯುಐಡಿಎಐ ಸುಲಭಗೊಳಿಸಲಾಗುತ್ತಿದೆ. ಆಧಾರ್ ಕಾರ್ಡನ್ನು ಮೊಬೈಲ್ ನಂಬರ್ ಗೆ ಲಿಂಕ್ ಮಾಡಬೇಕು. ಒಂದು ವೇಳೆ ಹೊಸ ನಂಬರ್ ಪಡೆದಿದ್ದರೆ ಅದನ್ನು ನವೀಕರಿಸಬೇಕಾಗುತ್ತದೆ.
ಈಗ ಯುಐಡಿಎಐ ಮೊಬೈಲ್ ನಂಬರ್ ನವೀಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಪ್ರಮುಖ ನಿರ್ಧಾರವನ್ನು ತೆಗೆದುಕೊಂಡಿದೆ. ಆಧಾರ್ ಕಾರ್ಡ್‌ನಲ್ಲಿರುವ ಮೊಬೈಲ್ ಸಂಖ್ಯೆಯನ್ನು ನವೀಕರಿಸುವ ಪ್ರಕ್ರಿಯೆಯನ್ನು ಸುಲಭಗೊಳಿಸಿದೆ. ಯಾವುದೇ ದಾಖಲೆಗಳಿಲ್ಲದೆ ಆಧಾರ್‌ನಲ್ಲಿ ಮೊಬೈಲ್ ಸಂಖ್ಯೆಯನ್ನು ನವೀಕರಿಸಬಹುದು.
GOOD NEWS: ಆಧಾರ್ ಕಾರ್ಡ್ ಮೂಲಕ ಕೆಲವೇ ಕ್ಷಣಗಳಲ್ಲಿ ತಯಾರಿಸಿ ಪಾನ್ ಕಾರ್ಡ್
ಮೊಬೈಲ್ ಸಂಖ್ಯೆಯನ್ನು ಆಧಾರ್‌ಗೆ ಲಿಂಕ್ ಮಾಡಲು ಆಧಾರ್ ಕೇಂದ್ರಕ್ಕೆ ಹೋಗಬೇಕು. ಆನ್‌ಲೈನ್ ನಲ್ಲಿ ಮೊಬೈಲ್ ಸಂಖ್ಯೆಗಳನ್ನು ಲಿಂಕ್ ಮಾಡಲು ಸಾಧ್ಯವಿಲ್ಲ. ಆನ್‌ಲೈನ್ ಮಾಧ್ಯಮದ ಮೂಲಕ ಹತ್ತಿರದ ಆಧಾರ್ ಕೇಂದ್ರಕ್ಕೆ ಅಪಾಯಿಂಟ್ಮೆಂಟ್ ತೆಗೆದುಕೊಳ್ಳಬಹುದು.
ಯುಐಡಿಎಐ ಬಿಡುಗಡೆ ಮಾಡಿದ ಇತ್ತೀಚಿನ ನವೀಕರಣದ ಪ್ರಕಾರ, ಸಂಖ್ಯೆಯನ್ನು ಆಧಾರ್ ಕಾರ್ಡ್‌ನೊಂದಿಗೆ ಲಿಂಕ್ ಮಾಡಲು ಯಾವುದೇ ದಾಖಲೆಗಳ ಅಗತ್ಯವಿಲ್ಲ. ಆಧಾರ್ ಕಾರ್ಡನ್ನು ಹತ್ತಿರದ ಆಧಾರ್ ಕೇಂದ್ರಕ್ಕೆ ತೆಗೆದುಕೊಂಡು ಹೋಗಿ ಮೊಬೈಲ್ ಸಂಖ್ಯೆಯನ್ನು ನವೀಕರಿಸಬೇಕು. ಇದಕ್ಕೆ 50 ರೂಪಾಯಿ ಶುಲ್ಕ ಪಾವತಿಸಬೇಕಾಗುತ್ತದೆ.