ಧಾರವಾಡ: ಧಾರವಾಡ ಜಿಲ್ಲೆಯ ನರೇಂದ್ರ ಗ್ರಾಮದಲ್ಲಿ ಇತ್ತೀಚೆಗೆ ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಎರಡು ಗುಂಪುಗಳನ್ನು ಚದುರಿಸಲು ಪೊಲೀಸರು ನಡೆಸಿದ ಲಘು ಲಾಠಿ ಪ್ರಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪೊಲೀಸ್ ಕಾನ್ಸ್ಟೇಬಲ್ ಗಳನ್ನು ಅಮಾನತು ಮಾಡಲಾಗಿದೆ.
ಗಣೇಶ ವಿಸರ್ಜನೆ ಸಮಯದಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳದೆ ಇರುವುದು, ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಗ್ರಾಮೀಣ ಪೊಲೀಸ್ ಠಾಣೆಯ ಕೃಷ್ಣ ವಿಭೂತಿ ಹಾಗೂ ಮಹಮ್ಮದ್ ಸೈಯದ್ ಅವರನ್ನು ಅಮಾನತು ಮಾಡಿ ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ ಆದೇಶಿಸಿದ್ದಾರೆ.