ಬೆಂಗಳೂರು: ಬೆಂಗಳೂರಿನಲ್ಲಿ ದೇಶದ ಮೊದಲ 3ಡಿ ಮುದ್ರಿತ ಅಂಚೆ ಕಚೇರಿಯನ್ನು ರೈಲ್ವೇ, ಮತ್ತು ಎಲೆಕ್ಟ್ರಾನಿಕ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಬೆಳಿಗ್ಗೆ ಲೋಕಾರ್ಪಣೆಗೊಳಿಸಿದರು.
ಬೆಂಗಳೂರಲ್ಲಿ ದೇಶದ ಮೊದಲ 3D ಮುದ್ರಿತ ಅಂಚೆ ಕಚೇರಿಗೆ ಚಾಲನೆ ಸಿಕ್ಕ ಹಿನ್ನೆಲೆ ಪ್ರಧಾನಿ ಮೋದಿ ಟ್ವೀಟ್ ಮಾಡಿ ಖುಷಿ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನ ಕೇಂಬ್ರಿಡ್ಜ್ ಲೇಔಟ್ ನಲ್ಲಿ ಭಾರತದ ಮೊದಲ 3ಡಿ ಮುದ್ರಿತ ಅಂಚೆ ಕಚೇರಿಯನ್ನು ನೋಡಿ ಪ್ರತಿಯೊಬ್ಬ ಭಾರತೀಯರೂ ಹೆಮ್ಮೆ ಪಡುತ್ತಾರೆ. ನಮ್ಮ ರಾಷ್ಟ್ರದ ನಾವೀನ್ಯತೆ ಮತ್ತು ಪ್ರಗತಿಗೆ ಸಾಕ್ಷಿಯಾಗಿದೆ, ಇದು ಸ್ವಾವಲಂಬಿ ಭಾರತದ ಸ್ಫೂರ್ತಿಯನ್ನು ಸಾಕಾರಗೊಳಿಸುತ್ತದೆ. ಅಂಚೆ ಕಚೇರಿ ಪೂರ್ಣಗೊಳ್ಳುವುದನ್ನು ಖಚಿತಪಡಿಸಿಕೊಳ್ಳಲು ಶ್ರಮಿಸಿದವರಿಗೆ ಅಭಿನಂದನೆಗಳು ಎಂದು ಮೋದಿ ಟ್ವೀಟ್ ಮೂಲಕ ಸಂತಸ ಹಂಚಿಕೊಂಡಿದ್ದಾರೆ.
https://twitter.com/narendramodi/status/1692438486522196383?ref_src=twsrc%5Etfw%7Ctwcamp%5Etweetembed%7Ctwterm%5E1692438486522196383%7Ctwgr%5Ef08a20885b1eb566dda8458517348052c62997ec%7Ctwcon%5Es1_&ref_url=https%3A%2F%2Fkannadadunia.com%2Fwp-admin%2Fpost-new.php
ನಗರದ ಕೆಂಬ್ರಿಡ್ಜ್ ಲೇಔಟ್ನಲ್ಲಿ ನಿರ್ಮಾಣವಾಗಿರುವ ದೇಶದ ಮೊದಲ 3ಡಿ ಮುದ್ರಿತ ಅಂಚೆ ಕಚೇರಿಯನ್ನು ಅಶ್ವಿನಿ ವೈಷ್ಣವ್ ಬೆಳಿಗ್ಗೆ ಉದ್ಘಾಟಿಸಿದರು.ಈ ಅಂಚೆ ಕಚೇರಿಗೆ “ಕೇಂಬ್ರಿಡ್ಜ್ ಲೇಔಟ್ ಪಿಒ” ಎಂದು ಹೆಸರಿಸಲಾಗಿದೆ. ಮಾರ್ಚ್ 21 ರಿಂದ ನಿರ್ಮಾಣದ ಕಾರ್ಯ ಆರಂಭವಾಗಿದ್ದು 44 ದಿನಗಳಲ್ಲಿ ಕಾಮಗಾರಿ ಪೂರ್ಣಗೊಂಡಿದೆ. ಇದನ್ನು ಸಚಿವ ಅಶ್ವಿನಿ ವೈಷ್ಣವ್ ಬೆಳಿಗ್ಗೆಉದ್ಘಾಟಿಸಿ ನಂತರ ವಿಶೇಷ ಅಂಚೆ ಲಕೋಟೆ ಬಿಡುಗಡೆ ಮಾಡಿದರು.