ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ; ಜಗದೀಶ್ ಶೆಟ್ಟರ್ ಆರೋಪ

ಹುಬ್ಬಳ್ಳಿಯಲ್ಲಿ ನೇಹಾ ಹಿರೇಮಠ್ ಕೊಲೆ ಪ್ರಕರಣದ ಬಳಿಕ ಈಗ ಮತ್ತೊಂದು ಘೋರ ಘಟನೆ ನಡೆದಿದೆ. ಅಂಜಲಿ ಎಂಬಾಕೆಯನ್ನು ಕಿರಾತಕನೊಬ್ಬ ಆಕೆಯ ಮನೆಗೇ ನುಗ್ಗಿ ಹತ್ಯೆಗೈದಿದ್ದಾನೆ.

ಈ ಘಟನೆಗಳು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದು, ವಿಪಕ್ಷಗಳ ನಾಯಕರು ಸಹ ಕಿಡಿ ಕಾರುತ್ತಿದ್ದಾರೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಮಧ್ಯೆ ಇದೀಗ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಸಹ ರಾಜ್ಯ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ.

ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದಿದೆ. ನೇಹಾ ಹತ್ಯೆ ಬಳಿಕ ಹುಬ್ಬಳ್ಳಿ ಪೊಲೀಸರು ಎಚ್ಚೆತ್ತುಕೊಳ್ಳದ ಪರಿಣಾಮ ಈಗ ಅಂಜಲಿ ಕೊಲೆಯಾಗಿದೆ ಎಂದು ಆರೋಪಿಸಿದ್ದಾರೆ.

ಅಧಿಕಾರಿಗಳು ಸರ್ಕಾರದ ಮಾತು ಕೇಳುತ್ತಿಲ್ಲ. ಹುಬ್ಬಳ್ಳಿ ಪೊಲೀಸರು ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸಂಪೂರ್ಣವಾಗಿ ವಿಫಲರಾಗಿದ್ದಾರೆ. ರಾಜ್ಯ ಸರ್ಕಾರ ಈಗಲಾದರೂ ಎಚ್ಚೆತ್ತುಕೊಳ್ಳಬೇಕಿದೆ ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read