BIG NEWS: ಹೋಟೆಲ್, ಕಲ್ಯಾಣ ಮಂಟಪಗಳಲ್ಲಿ ಆಹಾರ ಪೋಲು ತಡೆಗೆ ಕಾನೂನು ಜಾರಿ

ಬೆಂಗಳೂರು: ಆಹಾರ ಪದಾರ್ಥಗಳನ್ನು ವ್ಯರ್ಥ ಮಾಡಬಾರದು, ಈ ನಿಟ್ಟಿನಲ್ಲಿ ರಾಜ್ಯದ ಹೋಟೆಲ್ ಗಳು, ಕಲ್ಯಾಣ ಮಂಟಪಗಳಲ್ಲಿ ಆಹಾರ ಪೋಲಾಗುವುದನ್ನು ತಡೆಯಲು ಕಾನೂನು ರೂಪಿಸುವ ಚಿಂತನೆ ನಡೆದಿದೆ ಎಂದು ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಹೆಚ್. ಮುನಿಯಪ್ಪ ತಿಳಿಸಿದ್ದಾರೆ.

ವಿಶ್ವ ವಿಹಾರ ದಿನಾಚರಣೆ ಅಂಗವಾಗಿ ಬೆಂಗಳೂರು ಕೃಷಿ ವಿವಿ ಹೆಬ್ಬಾಳ ಜಿಕೆವಿಕೆಯ ಡಾ. ಬಾಬು ರಾಜೇಂದ್ರ ಪ್ರಸಾದ್ ಅಂತರರಾಷ್ಟ್ರೀಯ ಸಮಾವೇಶ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಆಹಾರ ಪೋಲಾಗುವುದನ್ನು ತಡೆಗಟ್ಟಲು ಕಾನೂನು ರೂಪಿಸುವ ಕುರಿತು ಈಗಾಗಲೇ ಹೋಟೆಲ್ ಮಾಲೀಕರೊಂದಿಗೆ ಚರ್ಚೆ ನಡೆಸಲಾಗಿದೆ ಎಂದು ಸಚಿವ ಮುನಿಯಪ್ಪ ತಿಳಿಸಿದ್ದಾರೆ.

ಕಲ್ಯಾಣ ಮಂಟಪಗಳಲ್ಲಿ ಭಾರಿ ಪ್ರಮಾಣದಲ್ಲಿ ಆಹಾರ ವ್ಯರ್ಥವಾಗುತ್ತಿದೆ. ಈ ಸಂಬಂಧ ಕಲ್ಯಾಣ ಮಂಟಪಗಳ ಮಾಲೀಕರ ಸಣೆ ಕರೆದು ಚರ್ಚೆ ನಡೆಸಲಾಗುವುದು. ದೇಶದಲ್ಲಿ ವಾರ್ಷಿಕ 90 ಸಾವಿರ ಕೋಟಿ ರೂಪಾಯಿ ಮೌಲ್ಯದ ಆಹಾರ ಪದಾರ್ಥಗಳು ವ್ಯರ್ಥವಾಗುತ್ತಿದ್ದು, ಇದನ್ನು ತಡೆಯುವುದು ಪ್ರತಿಯೊಬ್ಬರ ಕರ್ತವ್ಯ ಎಂದು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read