ರಾಯಚೂರು: ರಾಯಚೂರು ಜಿಲ್ಲೆ ಮಸ್ಕಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರೌಢಶಾಲಾ ವಿದ್ಯಾರ್ಥಿನಿ ಗರ್ಭ ಧರಿಸಲು ಕಾರಣನಾದ ಕಾನೂನು ವಿದ್ಯಾರ್ಥಿ ಬಂಧಿಸಲಾಗಿದೆ.
ದೇಸಾಯಿ ಭೋಗಾಪುರದ ಶಿವಮೂರ್ತಿ(25) ವಿರುದ್ಧ ಮಸ್ಕಿ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಾಗಿದೆ. ಬಾಲಕಿ ಗರ್ಭಿಣಿಯಾಗಿದ್ದು, ಗರ್ಭಪಾತಕ್ಕೆ ಒತ್ತಾಯಿಸಿ ಅತಿಯಾಗಿ ಮಾತ್ರೆಗಳನ್ನು ನೀಡಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದಾಳೆ. ವಿದ್ಯಾರ್ಥಿನಿಯನ್ನು ಮೊದಲಿಗೆ ಲಿಂಗಸುಗೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರರ ರಕ್ತ ಹೀನತೆಯ ಕಾರಣ ಚಿಕಿತ್ಸೆ ಕಷ್ಟವೆಂದು ವೈದ್ಯರು ಹೇಳಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕೊಪ್ಪಳದಲ್ಲಿ ಕಾನೂನು ಶಿಕ್ಷಣ ಪಡೆಯುತ್ತಿರುವ ಶಿವಮೂರ್ತಿಯನ್ನು ಗುರುವಾರ ಬಂಧಿಸಲಾಗಿದೆ. ಮಸ್ಕಿ ಪೊಲೀಸ್ ಠಾಣೆಯಲ್ಲಿ ಅಪಹರಣ, ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
