HomeLatest Newsಸರ್ಕಾರಿ ಶಾಲೆಗಳ ಆಸ್ತಿ ಸಂರಕ್ಷಣೆಗೆ ಕಾನೂನು: ಅಧಿವೇಶನದಲ್ಲಿ ಹೊಸ ಮಸೂದೆ ಮಂಡನೆ

ಸರ್ಕಾರಿ ಶಾಲೆಗಳ ಆಸ್ತಿ ಸಂರಕ್ಷಣೆಗೆ ಕಾನೂನು: ಅಧಿವೇಶನದಲ್ಲಿ ಹೊಸ ಮಸೂದೆ ಮಂಡನೆ

ಎನ್.ಆರ್. ಪುರ: ಸರ್ಕಾರಿ ಶಾಲೆಗಳ ಆಸ್ತಿ ಸಂರಕ್ಷಣೆಗೆ ಕಾನೂನು ತರಲಾಗುವುದು ಎಂದು ಶಾಲಾ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಹೇಳಿದ್ದಾರೆ.

ಶಾಲೆಗಳಿಗೆ ದಾನ ನೀಡಿರುವ ಜಮೀನು, ಆಸ್ತಿಗಳ ಸಂರಕ್ಷಣೆಗಾಗಿ ಶೀಘ್ರವೇ ಹೊಸ ಮಸೂದೆ ಸಿದ್ಧಪಡಿಸಿ ಅಧಿವೇಶನದಲ್ಲಿ ಮಂಡಿಸಿ ಅನುಮೋದನೆ ಪಡೆಯಲಾಗುವುದು ಎಂದು ತಿಳಿಸಿದ್ದಾರೆ.

ಸರ್ಕಾರಿ ಶಾಲೆಗಳ ಆಸ್ತಿಗಳು ಒತ್ತುವರಿಯಾಗಿರುವ ಬಗ್ಗೆ ದೂರುಗಳು ಬಂದಿವೆ. ಈ ಬಗ್ಗೆ ಅಧಿವೇಶನದಲ್ಲಿ ಮಸೂದೆ ಅಂಗೀಕರಿಸಿ ಶಾಲೆಗಳ ಆಸ್ತಿಗಳನ್ನು ಸಂರಕ್ಷಣೆ ಮಾಡಲಾಗುವುದು. ಫಾರ್ಮ್ ನಂಬರ್ 7 ಇರುವವರಿಗೂ ಅನ್ಯಾಯವಾಗದಂತೆ ನೋಡಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶಿಕ್ಷಣಕ್ಕೆ ನೀಡಿದ ದಾನಗಳನ್ನು ರಕ್ಷಣೆ ಮಾಡುವ ಬಿಲ್ ಅನ್ನು ಈ ಅಧಿವೇಶನದಲ್ಲಿ ಮಂಡಿಸಲು ಯೋಜಿಸಲಾಗಿತ್ತು. ಇದಕ್ಕೆ ಕಾನೂನಾತ್ಮಕ ಪ್ರಕ್ರಿಯೆ ಇರುವುದರಿಂದ ಇನ್ನೂ ಒಂದು ತಿಂಗಳು ಕಾಲಾವಕಾಶ ಬೇಕಿದೆ. ಅಗತ್ಯ ತಯಾರಿ ಮಾಡಿಕೊಂಡು ಮಸೂದೆ ಸಿದ್ಧಪಡಿಸಿ ನಂತರ ಅಧಿವೇಶನದಲ್ಲಿ ಮಂಡಿಸಿ ಅನುಮೋದನೆ ಪಡೆಯಲಾಗುವುದು ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular