HomeLatest Newsಲಾರೆನ್ಸ್ ಬಿಷ್ಣೋಯಿ ಗ್ಯಾಂಗ್ ಸಂಪರ್ಕದಲ್ಲಿದ್ದ ಇಬ್ಬರು ಮೋಸ್ಟ್ ವಾಂಟೆಡ್ ದರೋಡೆಕೋರರು ಅರೆಸ್ಟ್

ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್ ಸಂಪರ್ಕದಲ್ಲಿದ್ದ ಇಬ್ಬರು ಮೋಸ್ಟ್ ವಾಂಟೆಡ್ ದರೋಡೆಕೋರರು ಅರೆಸ್ಟ್

ವಾಷಿಂಗ್ಟನ್: ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್ ಜೊತೆ ಸಂಪರ್ಕದಲ್ಲಿದ್ದ ಮೋಸ್ಟ್ ವಾಂಟೆಡ್ ಇಬ್ಬರು ದರೋಡೆಕೋರರನ್ನು ಅಮೆರಿಕಾ ಹಾಗೂ ಜಾರ್ಜಿಯಾದಲ್ಲಿ ಭಾರತೀಯ ಭದ್ರತಾ ಪಡೆಗಳು ಬಂಧಿಸಿವೆ.

ವೆಂಕಟೇಶ್ ಗಾರ್ಗ್ ಹಾಗೂ ಭಾನು ರಾಣಾ ಬಂಧಿತ ಆರೋಪಿಗಳು. ಹರಿಯಾಣ ಪೊಲೀಸರು ಹಾಗೂ ಭದ್ರತಾ ಸಂಸ್ಥೆಯ ಅಧಿಕಾರಿಗಳು ವೆಂಕಟೇಶ್ ಗಾರ್ಗ್ ನನ್ನು ಜಾರ್ಜಿಯಾದಲ್ಲಿ ಬಂಧಿಸಿದ್ದಾರೆ. ಭಾನು ರಾಣಾನನ್ನು ಅಮೆರಿಕಾದಲ್ಲಿ ಬಂಧಿಸಲಾಗಿದೆ.

ಈ ಇಬ್ಬರು ಕುಖ್ಯಾತರು ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್ ಜೊತೆ ಸಂಪರ್ಕದಲ್ಲಿದ್ದರು. ಇಬ್ಬರೂ ಶೀಘ್ರದಲ್ಲಿಯೇ ಭಾರತಕ್ಕೆ ಗಡಿಪಾರಾಗಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular