HomeLatest NewsBREAKING: ನೈಸ್ ರಸ್ತೆಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ವಕೀಲನ ಶವ ಪತ್ತೆ: ಕೊಲೆ ಶಂಕೆ

BREAKING: ನೈಸ್ ರಸ್ತೆಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ವಕೀಲನ ಶವ ಪತ್ತೆ: ಕೊಲೆ ಶಂಕೆ

ಬೆಂಗಳೂರು: ನೈಸ್ ರಸ್ತೆಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ವಕೀಲನ ಶವ ಪತ್ತೆಯಾಗಿದೆ. ಬನ್ನೇರುಘಟ್ಟ- ಕನಕಪುರ ನೈಸ್ ರಸ್ತೆಯಲ್ಲಿ ವಕೀಲ ಜಗದೀಶ್ ಶವ ಪತ್ತೆಯಾಗಿದೆ.

ಜಗದೀಶ್ ಕಾರ್ ನಿಂತಿದ್ದ 200 ಮೀಟರ್ ದೂರದಲ್ಲಿ ಮೃತದೇಹ ಬಿದ್ದಿದೆ. ಕಾರ್ ನ ಹಲವೆಡೆ ಅಪಘಾತವಾದ ಗುರುತುಗಳು ಪತ್ತೆಯಾಗಿದೆ. ನಿನ್ನೆ ಸಂಜೆ 7:30 ರಿಂದ 8 ಗಂಟೆ ಸುಮಾರಿಗೆ ಜಗದೀಶ್ ಶವ ಪತ್ತೆಯಾಗಿದೆ.

ಕಾರು ಟಚ್ ಆಗಿರುವ ವಿಚಾರಕ್ಕೆ ಗಲಾಟೆಯಾಗಿ ಕೊಲೆ ನಡೆದಿದೆಯೇ ಅಥವಾ ಉದ್ದೇಶಪೂರ್ವಕವಾಗಿ ಕೊಲೆ ಮಾಡಲಾಗಿದೆಯೇ? ಇಲ್ಲವೇ ಅಪಘಾತ ನಡೆದಿದೆಯೇ ಎಂಬುದರ ಕುರಿತಾಗಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಸಿಸಿಟಿವಿ ದೃಶ್ಯಗಳನ್ನು ಕೆಂಗೇರಿ ಪೊಲೀಸರು ಪರಿಶೀಲಿಸಿದ್ದಾರೆ. ಮೇಲ್ನೋಟಕ್ಕೆ ಕೊಲೆಯಾದ ರೀತಿ ಕಾಣಿಸುತ್ತಿದೆ ಎನ್ನಲಾಗಿದ್ದು, ಘಟನೆ ಸಂಬಂಧ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular