ಬೆಂಗಳೂರು: ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಗಳ ವರ್ಗಾವಣೆ ಶಿಫಾರಸಿಗೆ ಆಕ್ಷೇಪ ವ್ಯಕ್ತವಾಗಿದೆ. ಹಿರಿಯ ವಕೀಲರ ಸಭೆಯಲ್ಲಿ ಈ ಕುರಿತು ನಿರ್ಣಯ ಅಂಗೀಕರಿಸಲಾಗಿದೆ.
ಸುಪ್ರೀಂಕೋರ್ಟ್ ಕೊಲಿಜಿಯಂ ಶಿಫಾರಸಿಗೆ ಅನುಮತಿ ನೀಡದಂತೆ ಮನವಿ ಮಾಡಲಾಗಿದೆ. ಕೇಂದ್ರ ಸರ್ಕಾರಕ್ಕೆ ಹಿರಿಯ ವಕೀಲರು ಮನವಿ ಮಾಡಿದ್ದು, ದಕ್ಷ ನ್ಯಾಯಮೂರ್ತಿಗಳನ್ನು ವರ್ಗಾವಣೆ ಮಾಡಬಾರದು ಎಂದು ಒತ್ತಾಯಿಸಲಾಗಿದೆ. ಇಂದು ಹೈಕೋರ್ಟ್ ಎದುರು ಪ್ರತಿಭಟನೆ ನಡೆಸಲು ತೀರ್ಮಾನ ಕೈಗೊಳ್ಳಲಾಗಿದೆ.
ರಾಜ್ಯ ಹೈಕೋರ್ಟ್ ನ ನಾಲ್ವರು ನ್ಯಾಯಮೂರ್ತಿಗಳನ್ನು ದೇಶದ ಇತರೆ ಹೈಕೋರ್ಟ್ ಗಳಿಗೆ ವರ್ಗಾವಣೆ ಮಾಡಲು ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಕೊಲಿಜಿಯಂ ಶಿಫಾರಸು ಮಾಡಿದೆ. ಹೈಕೋರ್ಟ್ ಹಿರಿಯ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರನ್ನು ಒಡಿಶಾ, ನ್ಯಾಯಮೂರ್ತಿ ಕೆ. ನಟರಾಜನ್ ಅವರನ್ನು ಕೇರಳ, ನ್ಯಾಯಮೂರ್ತಿ ಎನ್.ಎಸ್. ಸಂಜಯ್ ಗೌಡ ಅವರನ್ನು ಗುಜರಾತ್ ಮತ್ತು ನ್ಯಾಯಮೂರ್ತಿ ಹೇಮಂತ್ ಚಂದನಗೌಡರ್ ಅವರನ್ನು ಮದ್ರಾಸ್ ಹೈಕೋರ್ಟ್ ಗೆ ವರ್ಗಾವಣೆ ಮಾಡಲು ಸುಪ್ರೀಂಕೋರ್ಟ್ ಕೊಲಿಜಿಯಂ ಶಿಫಾರಸು ಮಾಡಿದೆ.