ಬೆಂಗಳೂರು : ಸರ್ಕಾರಿ ವಕೀಲರು ಹೆಚ್ಚು ಮಾತನಾಡುವುದಿಲ್ಲ ಎಂಬ ಆರೋಪವಿದೆ. ಪ್ರಕರಣವನ್ನು ಚೆನ್ನಾಗಿ ಓದಿ, ಸರಿಯಾದ ರೀತಿಯಲ್ಲಿ ನ್ಯಾಯಾಧೀಶರ ಮುಂದೆ ಮಂಡಿಸಬೇಕು ಹಾಗೂ ಕಕ್ಷಿದಾರರ ಹಕ್ಕನ್ನು ರಕ್ಷಿಸಬೇಕು. ಬೆಂಗಳೂರಿನ ವಕೀಲರ ಸಂಘ ಏಷ್ಯಾ ಖಂಡದಲ್ಲೇ ಅತ್ಯಂತ ದೊಡ್ಡ ಸಂಘವಾಗಿದ್ದು, 25 ಸಾವಿರ ಸದಸ್ಯರನ್ನು ಹೊಂದಿರುವುದು ಸಣ್ಣ ಸಂಗತಿಯೇನಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ವಕೀಲರ ಸಂಘದ ವತಿಯಿಂದ ಏರ್ಪಡಿಸಿದ್ದ ವಾರ್ಷಿಕ ದಿನಾಚರಣೆ ಹಾಗೂ ವಕೀಲರ ವೇದಿಕೆಯ ಅಭಿನಂದನೆ ಸ್ವೀಕರಿಸಿ ಮಾತನಾಡಿದರು.
ಸರ್ಕಾರಿ ವಕೀಲರು ಹೆಚ್ಚು ಮಾತನಾಡುವುದಿಲ್ಲ ಎಂಬ ಆರೋಪವಿದೆ. ಪ್ರಕರಣವನ್ನು ಚೆನ್ನಾಗಿ ಓದಿ, ಸರಿಯಾದ ರೀತಿಯಲ್ಲಿ ನ್ಯಾಯಾಧೀಶರ ಮುಂದೆ ಮಂಡಿಸಬೇಕು ಹಾಗೂ ಕಕ್ಷಿದಾರರ ಹಕ್ಕನ್ನು ರಕ್ಷಿಸಬೇಕು. ಬೆಂಗಳೂರಿನ ವಕೀಲರ ಸಂಘ ಏಷ್ಯಾ ಖಂಡದಲ್ಲೇ ಅತ್ಯಂತ ದೊಡ್ಡ ಸಂಘವಾಗಿದ್ದು, 25 ಸಾವಿರ ಸದಸ್ಯರನ್ನು ಹೊಂದಿರುವುದು ಸಣ್ಣ ಸಂಗತಿಯೇನಲ್ಲ. ವಕೀಲ ಸಂಘದವರು ಸಲ್ಲಿಸಿರುವ ಬೇಡಿಕೆಗಳನ್ನು ಸಕಾರಾತ್ಮಕವಾಗಿ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು. ಕಲ್ಯಾಣ ನಿಧಿಗೆ ಅನುದಾನವನ್ನು ಹೆಚ್ಚಿಸಲಾಗುವುದು. ಸರ್ವೋಚ್ಚ ನ್ಯಾಯಾಲಯದ ಪೀಠದ ಬಗ್ಗೆ ಪ್ರಯತ್ನ ಮಾಡಲಾಗುವುದು. ಪ್ರತಿನಿತ್ಯ ಕೋರ್ಟ್ ಕಲಾಪಗಳಲ್ಲೇ ತೊಡಗಿರುವ ವಕೀಲರಿಗೆ ಬೇಸಿಗೆ ರಜೆ ಸಂಜೀವಿನಿಯಂತೆ. ಮೇ 2ರಿಂದ ಶುರುವಾಗುವ ಬೇಸಿಗೆ ರಜೆಯನ್ನು ಕುಟುಂಬದೊಡನೆ ಸುಖಕರವಾಗಿ ಕಳೆಯಿರಿ ಎಂದರು.