HomeKarnatakaಲಕ್ಷ್ಮಣ್ ಸವದಿ ಕುಟುಂಬಕ್ಕು `ಹುಲಿ ಉಗುರು’ ಸಂಕಷ್ಟ : ಸವದಿ ಪುತ್ರ ಸುಮಿತ್ ಕೊರಳಿನಲ್ಲಿ ಲಾಕೆಟ್!

ಲಕ್ಷ್ಮಣ್ ಸವದಿ ಕುಟುಂಬಕ್ಕು `ಹುಲಿ ಉಗುರು’ ಸಂಕಷ್ಟ : ಸವದಿ ಪುತ್ರ ಸುಮಿತ್ ಕೊರಳಿನಲ್ಲಿ ಲಾಕೆಟ್!

ಬೆಂಗಳೂರು : ರಾಜ್ಯದಲ್ಲಿ ಸದ್ಯ ಭಾರೀ ಚರ್ಚೆಗೆ ಕಾರಣವಾಗಿರುವ ಹುಲಿ ಉಗುರು ಪ್ರಕರಣ ಇದೀಗ ಲಕ್ಷ್ಮಣ ಸವದಿ ಕುಟುಂಬಕ್ಕೂ ಕಾಲಿಟ್ಟಿದ್ದು, ಲಕ್ಷ್ಮಣ್ ಸವದಿ ಪುತ್ರ ಸುಮಿತ್ ಪುತ್ರನ ಕೊರಳಿನಲ್ಲಿ ಹುಲಿ ಉಗುರು ಧರಿಸಿರುವ ಫೋಟೋ ವೈರಲ್ ಆಗಿದೆ.

 ರಾಜ್ಯದಲ್ಲಿ ಹುಲಿ ಉಗುರು ವಿವಾದ ಜೋರಾಗಿದ್ದು, ಬೆಳಗಾವಿ ಜಿಲ್ಲೆಯಲ್ಲಿಯೂ ಸದ್ದು ಮಾಡುತ್ತಿದೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ ಮೃನಾಲ್ ಹೆಬ್ಬಾಳ್ಕರ್ ಅವರ ಕೊರಳಲ್ಲಿ ಹುಲಿ ಉಗುರು ಹೋಲುವ ಲಾಕೆಟ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆದ ಬೆನ್ನಲ್ಲೇ ಇದೀಗ ಲಕ್ಷ್ಮಣ ಸವದಿ ಪುತ್ರ ಸುಮಿತ್ ಪುತ್ರನ ಕೊರಳಿನಲ್ಲೂ ಹುಲಿ ಉಗುರಿನ ಲಾಕೇಟ್ ಪತ್ತೆಯಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹುಲಿ ಉಗುರು ಕೊರಳಿನಲ್ಲಿ ಧರಿಸಿದ್ದ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್‌ ಬಂಧನದ ಹಿಂದೆ ಷಡ್ಯಂತ್ರ ನಡೆದಿದೆ ಎನ್ನುವ ಆಕ್ರೋಶಗಳು ಭುಗಿಲೆದ್ದಿವೆ. ಹಾಗೆಯೇ ಮದುವೆ ಸಮಯದಲ್ಲಿ ಫೋಟೋ ಶೂಟ್‌ನಲ್ಲಿ ಹುಲಿ ಉಗುರು ಮಾದರಿ ಚೈನ್ ಧರಿಸಿದ್ದ ಸುಮಿತ್ ಸವದಿ ಫೋಟೋಗಳು ವೈರಲ್ ಆಗುತ್ತಿವೆ.

For Latest News Updates, Join Our Whatsapp Community🚩
RELATED ARTICLES

Most Popular