
ನವದೆಹಲಿ: ದೇಶದಾದ್ಯಂತ ಇರುವ ಎಲ್ಲಾ ಸರ್ಕಾರಿ ಅನುದಾನಿತ ಮತ್ತು ವಸತಿ ಶಾಲೆಗಳಲ್ಲಿ ವಿದ್ಯಾರ್ಥಿನಿಯರ ಸಂಖ್ಯೆಗೆ ಅನುಗುಣವಾಗಿ ಶೌಚಾಲಯಗಳನ್ನು ನಿರ್ಮಿಸಲು ರಾಷ್ಟ್ರೀಯ ಮಾದರಿಯನ್ನು ರೂಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ ಕೇಂದ್ರಕ್ಕೆ ನಿರ್ದೇಶನ ನೀಡಿದೆ.
ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ನೇತೃತ್ವದ ಪೀಠವು ರಾಷ್ಟ್ರೀಯವಾಗಿ ಮಹಿಳಾ ಶಾಲಾ ವಿದ್ಯಾರ್ಥಿಗಳಿಗೆ ಸ್ಯಾನಿಟರಿ ನ್ಯಾಪ್ಕಿನ್ ವಿತರಣೆಗೆ ರೂಪಿಸಿರುವ ನೀತಿಯ ಬಗ್ಗೆ ಕೇಂದ್ರ ಸರ್ಕಾರವನ್ನು ಕೇಳಿದೆ.
ನ್ಯಾಯಮೂರ್ತಿಗಳಾದ ಜೆ.ಬಿ. ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠವು, ಸ್ಯಾನಿಟರಿ ನ್ಯಾಪ್ಕಿನ್ ವಿತರಣೆಯ ಪ್ರಕ್ರಿಯೆಯಲ್ಲಿ ಕೇಂದ್ರವು ಏಕರೂಪತೆಯನ್ನು ತರಬೇಕು ಎಂದು ಹೇಳಿದೆ.
ಶಾಲೆಗೆ ಹೋಗುವ ಬಾಲಕಿಯರಿಗೆ ಉಚಿತವಾಗಿ ಸ್ಯಾನಿಟರಿ ನ್ಯಾಪ್ ಕಿನ್ ಗಳನ್ನು ವಿತರಿಸಲು ಕರಡು ರಾಷ್ಟ್ರೀಯ ನೀತಿಯನ್ನು ರೂಪಿಸಲಾಗಿದೆ. ಅವರ ಅಭಿಪ್ರಾಯಗಳನ್ನು ಪಡೆಯಲು ಮಧ್ಯಸ್ಥಗಾರರಿಗೆ ಕಳುಹಿಸಲಾಗಿದೆ ಎಂದು ವಿಚಾರಣೆಯ ಸಂದರ್ಭದಲ್ಲಿ ಕೇಂದ್ರವು ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.
ಶಾಲೆಗಳಲ್ಲಿ ಓದುತ್ತಿರುವ ಬಾಲಕಿಯರ ಋತುಚಕ್ರದ ನೈರ್ಮಲ್ಯದ ಬಗ್ಗೆ ಏಕರೂಪದ ರಾಷ್ಟ್ರೀಯ ನೀತಿಯನ್ನು ರೂಪಿಸುವ ಕುರಿತು ಕೇಂದ್ರಕ್ಕೆ ತಮ್ಮ ಪ್ರತಿಕ್ರಿಯೆಯನ್ನು ಸಲ್ಲಿಸದ ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ಈ ಹಿಂದೆ ಎಚ್ಚರಿಕೆ ನೀಡಿತ್ತು.
ಏಪ್ರಿಲ್ 10 ರಂದು ಸುಪ್ರೀಂ ಕೋರ್ಟ್ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ(MOHFW) ಕಾರ್ಯದರ್ಶಿಯನ್ನು ರಾಜ್ಯಗಳು ಮತ್ತು ಯುಟಿಗಳೊಂದಿಗೆ ಸಮನ್ವಯಗೊಳಿಸಲು ಮತ್ತು ರಾಷ್ಟ್ರೀಯ ನೀತಿಯನ್ನು ರೂಪಿಸಲು ಸಂಬಂಧಿತ ಡೇಟಾವನ್ನು ಸಂಗ್ರಹಿಸಲು ನೋಡಲ್ ಅಧಿಕಾರಿಯಾಗಿ ನೇಮಿಸಿತ್ತು.
MoHFW, ಶಿಕ್ಷಣ ಸಚಿವಾಲಯ ಮತ್ತು ಜಲ ಶಕ್ತಿ ಸಚಿವಾಲಯವು ಮುಟ್ಟಿನ ನೈರ್ಮಲ್ಯ ನಿರ್ವಹಣೆಯ ಯೋಜನೆಗಳನ್ನು ಹೊಂದಿದೆ ಎಂದು ಅದು ಗಮನಿಸಿದೆ.
ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ತಮ್ಮ ಮುಟ್ಟಿನ ನೈರ್ಮಲ್ಯ ನಿರ್ವಹಣಾ ಕಾರ್ಯತಂತ್ರಗಳು ಮತ್ತು ಯೋಜನೆಗಳನ್ನು ಕೇಂದ್ರದಿಂದ ಒದಗಿಸಲಾದ ನಿಧಿಗಳ ಸಹಾಯದಿಂದ ಅಥವಾ ತಮ್ಮದೇ ಸಂಪನ್ಮೂಲಗಳ ಮೂಲಕ ರಾಷ್ಟ್ರೀಯ ಆರೋಗ್ಯ ಮಿಷನ್ನ ಮಿಷನ್ ಸ್ಟೀರಿಂಗ್ ಗ್ರೂಪ್‌ಗೆ ನಾಲ್ಕು ವಾರಗಳ ಅವಧಿಯಲ್ಲಿ ಸಲ್ಲಿಸಲು ಆದೇಶಿಸಿದೆ. .
ಶಾಲೆಗಳಲ್ಲಿ ಕಡಿಮೆ ಬೆಲೆಯ ಸ್ಯಾನಿಟರಿ ಪ್ಯಾಡ್‌ಗಳು ಮತ್ತು ವೆಂಡಿಂಗ್ ಮೆಷಿನ್‌ಗಳನ್ನು ಒದಗಿಸಲು ಮತ್ತು ಅವುಗಳ ಸೂಕ್ತ ವಿಲೇವಾರಿ ಮಾಡಲು ತೆಗೆದುಕೊಂಡ ಕ್ರಮಗಳನ್ನು ಸೂಚಿಸಲು ಎಲ್ಲಾ ರಾಜ್ಯಗಳು ಮತ್ತು ಯುಟಿಗಳನ್ನು ಕೇಳಿದೆ.
ಕಾಂಗ್ರೆಸ್ ನಾಯಕಿ ಮತ್ತು ಸಾಮಾಜಿಕ ಕಾರ್ಯಕರ್ತೆ ಜಯ ಠಾಕೂರ್ ಅವರು ಸಲ್ಲಿಸಿದ ಮನವಿಯಲ್ಲಿ 11 ರಿಂದ 18 ವರ್ಷದೊಳಗಿನ ಬಡ ಹಿನ್ನೆಲೆಯ ಹದಿಹರೆಯದ ಮಹಿಳೆಯರು ಶಿಕ್ಷಣವನ್ನು ಪಡೆಯುವಲ್ಲಿ ಗಂಭೀರ ತೊಂದರೆಗಳನ್ನು ಎದುರಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕೆಂದು ಕೋರಲಾಗಿತ್ತು.

 
		 
		 
		 
		 Loading ...
 Loading ... 
		 
		 
		