ಮೃತ ವ್ಯಕ್ತಿಯ ಜಮೀನಿನಲ್ಲಿ ಅಕ್ರಮ ಲೇಔಟ್ ನಿರ್ಮಾಣ: ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಸಂಸದ ಪ್ರಜ್ವಲ್ ರೇವಣ್ಣ ಮನವಿ

ಹಾಸನ: ಹಾಸನ ತಾಲೂಕಿನ ಶಾಂತಿಗ್ರಾಮ ಹೋಬಳಿಯ ಕೊಂಡಗೋಡನಹಳ್ಳಿಯ ಸಿದ್ದಯ್ಯ ಎನ್ನುವ ಮೃತ ವ್ಯಕ್ತಿಯ ಹೆಸರಲ್ಲಿದ್ದ 4.31 ಎಕರೆ ಜಮೀನನ್ನು ಅಕ್ರಮವಾಗಿ ಪರಭಾರೆ ಮಾಡಿ ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಲೋಕಸಭೆ ಸದಸ್ಯ ಪ್ರಜ್ವಲ್ ರೇವಣ್ಣ ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದಾರೆ.

ಜಿಲ್ಲಾ ಪಂಚಾಯತಿಯ ಹೊಯ್ಸಳ ಸಭಾಂಗಣದಲ್ಲಿ ದಿಶಾ ಸಮಿತಿ ಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ಅವರು, ಸಿದ್ದಯ್ಯ ಮೃತಪಟ್ಟ ನಂತರ 4.31 ಎಕರೆ ಜಮೀನಿಗೆ ನಕಲಿ ವಂಶವೃಕ್ಷ ಸೃಷ್ಟಿಸಿ ಮತ್ತೊಬ್ಬ ವ್ಯಕ್ತಿಯ ಹೆಸರಿಗೆ ಖಾತೆ ಮಾಡಿಸಲಾಗಿದೆ. ನಂತರ ಆ ಜಮೀನನ್ನು ಲೇಔಟ್ ಮಾಡಿ ಮಾರಾಟ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಈ ಲೇಔಟ್ ನಲ್ಲಿ ಕಂದಾಯ ನಿರೀಕ್ಷಕರು, ಗ್ರಾಮ ಲೆಕ್ಕಾಧಿಕಾರಿ, ಪಿಡಿಒ, ಪಂಚಾಯ್ತಿ ಸದಸ್ಯರು ತಲಾ ಎರಡೆರಡು ಸೈಟ್ ಹಂಚಿಕೊಂಡಿದ್ದಾರೆ. ಈ ಕುರಿತಾದ ದಾಖಲೆಗಳು ನಮ್ಮ ಬಳಿ ಇವೆ. ಸಿದ್ದಯ್ಯ ಅವರ ತಮ್ಮ ತಿಮ್ಮಯ್ಯ ಎಂಬುವರು ಜಿಲ್ಲಾಧಿಕಾರಿ ಕಚೇರಿಗೆ ಅಲೆದಾಡಿ ಸುಸ್ತಾಗಿದ್ದಾರೆ. ಅವ್ಯವಹಾರ ನಡೆಸಿ ನಕಲಿ ದಾಖಲೆ ಸೃಷ್ಟಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಪ್ರಜ್ವಲ್ ರೇವಣ್ಣ ಒತ್ತಾಯಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read