HomeKarnatakaಲೀಡ್ ಕೊಡಿಸಿದವರಿಗಷ್ಟೇ ಸ್ಥಾನಮಾನ, ಅಧಿಕಾರ: ಸಚಿವರು, ಶಾಸಕರು ಸೇರಿ ಕಾಂಗ್ರೆಸ್ ಮುಖಂಡರಿಗೆ ಎಚ್ಚರಿಕೆ

ಲೀಡ್ ಕೊಡಿಸಿದವರಿಗಷ್ಟೇ ಸ್ಥಾನಮಾನ, ಅಧಿಕಾರ: ಸಚಿವರು, ಶಾಸಕರು ಸೇರಿ ಕಾಂಗ್ರೆಸ್ ಮುಖಂಡರಿಗೆ ಎಚ್ಚರಿಕೆ

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಲೀಡ್ ಕೊಡಿಸಿದವರಿಗಷ್ಟೇ ಭವಿಷ್ಯದಲ್ಲಿ ಸ್ಥಾನಮಾನ, ಅಧಿಕಾರ ಸಿಗಲಿದೆ ಎಂದು ಪಕ್ಷದ ನಾಯಕರು ಎಚ್ಚರಿಕೆ ನೀಡಿದ್ದಾರೆ.

ಮೊದಲ ಹಂತದ ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆ ಮುಕ್ತಾಯವಾದ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ನಾಯಕರು ಬಿರುಸಿನ ಪ್ರಚಾರ ಕೈಗೊಂಡಿದ್ದಾರೆ. ಇದೇ ವೇಳೆ ಉಸ್ತುವಾರಿ ಸಚಿವರು, ಶಾಸಕರು, ಕಳೆದ ವಿಧಾನಸಭೆ ಚುನಾವಣೆಯ ಪರಾಜಿತ ಅಭ್ಯರ್ಥಿಗಳು, ಕೆಪಿಸಿಸಿ ಪದಾಧಿಕಾರಿಗಳಿಗೆ ಎಚ್ಚರಿಕೆ ನೀಡಲಾಗಿದ್ದು, ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳಿಗೆ ಲೀಡ್ ಕೊಡಿಸುವಂತೆ ತಿಳಿಸಲಾಗಿದೆ. ಲೀಡ್ ಕೊಡಿಸಿದವರಿಗೆ ಭವಿಷ್ಯದಲ್ಲಿ ಸ್ಥಾನಮಾನ ಅಧಿಕಾರ ಲಭಿಸಲಿದೆ ಎಂದು ಹೇಳಲಾಗಿದೆ.

ಶುಕ್ರವಾರ ಇಡೀ ದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕೆಪಿಸಿಸಿ ಕಚೇರಿಯಲ್ಲಿ ಚುನಾವಣಾ ಸಿದ್ದತೆಗೆ ಸಂಬಂಧಿಸಿದಂತೆ ಸರಣಿ ಸಭೆ ನಡೆಸಿದ್ದಾರೆ. ಆಯಾ ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗೆ ಸಿಗುವ ಮತಗಳ ಆಧಾರದ ಮೇಲೆ ಸಚಿವ ಸ್ಥಾನ ಭದ್ರವಾಗಿರುತ್ತದೆ. ಶಾಸಕರಿಗೆ ಸರ್ಕಾರದಲ್ಲಿ  ಪಕ್ಷದಲ್ಲಿ ಅವಕಾಶಗಳು ಸಿಗಲಿವೆ. ಕಳೆದ ಚುನಾವಣೆಯಲ್ಲಿ ತಮ್ಮ ಕ್ಷೇತ್ರದಲ್ಲಿ ಪಡೆದಿದ್ದ ಮತಗಳನ್ನು ಪಕ್ಷದ ಅಭ್ಯರ್ಥಿಗಳಿಗೆ ಕೊಡಿಸುವ ಟಾಸ್ಕ್, ಲೀಡ್ ಕೊಡಿಸಿದರಷ್ಟೇ ಅಧಿಕಾರ ಎಂದು ಎಚ್ಚರಿಕೆ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular