ಫ್ಲೋರಿಡಾ : ಅಂತಾರಾಷ್ಟ್ರೀಯ ಬಾಹ್ಯಾಕಾಶಯಾನ ಮತ್ತೆ ಮುಂದೂಡಿಕೆಯಾಗಿದೆ. ರಾಕೆಟ್ ನಲ್ಲಿ ಸೋರಿಕೆ ಕಂಡು ಬಂದ ಹಿನ್ನೆಲೆ ಮತ್ತೆ ರಾಕೆಟ್ ಉಡಾವಣೆಯನ್ನು ಮುಂದೂಡಲಾಗಿದೆ.
ಎಲ್ಲ ಅಂದುಕೊಂಡಂತೆ ಆಗಿದ್ದರೆ ಅಮೆರಿಕದ ಫ್ಲೋರಿಡಾದ ಬಾಹ್ಯಾಕಾಶ ಕೇಂದ್ರದಿಂದ ಜೂನ್ 11ರಂದು ಇಂದು ಸಂಜೆ 5:30ಕ್ಕೆ ರಾಕೆಟ್ ಉಡಾವಣೆಯಾಗಬೇಕಿತ್ತು. ರಾಕೆಟ್ ನಲ್ಲಿ ಸೋರಿಕೆ ಕಂಡು ಬಂದ ಹಿನ್ನೆಲೆ ಮತ್ತೆ ರಾಕೆಟ್ ಉಡಾವಣೆಯನ್ನು ಮುಂದೂಡಲಾಗಿದೆ.
ಭಾರತೀಯ ಶುಭಾಂಶು ಶುಕ್ಲಾ ಸೇರಿ ನಾಲ್ವರು ಯಾತ್ರಿಗಳನ್ನೊಳಗೊಂಡ ರಾಕೆಟ್ ನಾಳೆ ಅಮೆರಿಕದಿಂದ ಉಡಾವಣೆಯಾಗಬೇಕಿತ್ತು. ಅಮೆರಿಕದ ಆಕ್ಸಿಯೋಮ್- 4 ಯೋಜನೆಯಡಿ ಬಾಹ್ಯಾಕಾಶ ಪ್ರವಾಸ ಕೈಗೊಳ್ಳಲಾಗಿದೆ. ಅಂತರಿಕ್ಷ ಪ್ರವಾಸ ಕೈಗೊಳ್ಳುತ್ತಿರುವ ಎರಡನೇ ಭಾರತೀಯ ಶುಭಾಂಶು ಶುಕ್ಲಾ ಅವರಾಗಿದ್ದಾರೆ. ಇದಕ್ಕೂ ಮೊದಲು ಭಾರತದ ರಾಕೇಶ್ ಶರ್ಮಾ ಅವರು ಅಂತರಿಕ್ಷಯಾನ ಪ್ರವಾಸ ಕೈಗೊಂಡಿದ್ದರು.
ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಅವರನ್ನು ಒಳಗೊಂಡ ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ (ISS) ಗೆ ಬಹುನಿರೀಕ್ಷಿತ ಆಕ್ಸಿಯಮ್ -4 (ಆಕ್ಸ್ -4) ಕಾರ್ಯಾಚರಣೆಯ ಉಡಾವಣೆಯನ್ನು ಮುಂದೂಡಲಾಗಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಪ್ರಕಟಿಸಿದೆ.

