ಉಡುಪಿ: ನೌಕಾಪಡೆ ಹಡಗುಗಳ ರಹಸ್ಯ ಮಾಹಿತಿ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ 5ನೇ ಆರೋಪಿಯನ್ನು ಮಲ್ಪೆ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಭಾರತೀಯ ನೌಕಾಪಡೆ ಹಡಗುಗಳ ರಹಸ್ಯ ಮಾಹಿತಿಯನ್ನು ವಿದೇಶಕ್ಕೆ ರವಾನಿಸುತ್ತಿದ್ದ ಪಶ್ಚಿಮ ಬಂಗಾಳದ ಆಲಿಫ್ ಇಸ್ಲಾಂ(21) ಎಂಬಾತನನ್ನು ಮಲ್ಪೆ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಕೇರಳದ ಇಡುಕ್ಕಿ ಜಿಲ್ಲೆಯ ಮನ್ನಾರ್ ನ ಬಾಡಿಗೆ ಮನೆಯಲ್ಲಿ ನೆಲೆಸಿದ್ದ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಫೆಬ್ರವರಿ 21ರ ವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್ ಮಾಹಿತಿ ನೀಡಿದ್ದಾರೆ.
ಬಂಧಿತ ಆರೋಪಿ ಬಾಂಗ್ಲಾದೇಶದ ಪ್ರಜೆ ಎನ್ನುವ ಶಂಕೆ ವ್ಯಕ್ತವಾಗಿದೆ. ಆಲಿಫ್ ಇಸ್ಲಾಂ ಸೇರಿ ಇತರೆ ಆರೋಪಿಗಳು ನೌಕಾಪಡೆ ಹಡಗುಗಳಿಗೆ ಸಂಬಂಧಿಸಿದ ಗೌಪ್ಯ ಮಾಹಿತಿಯನ್ನು ಪಾಕಿಸ್ತಾನಕ್ಕೆ ರವಾನಿಸಿರುವುದು ದೃಢಪಟ್ಟಿತ್ತು.

