HomeKarnatakaಸರ್ಕಾರಿ ನೌಕರರಿಗೆ 2026ರ ಗಳಿಕೆ ರಜೆ ನಗದೀಕರಣ ಕುರಿತು ಬಿಗ್‌ ಅಪ್‌ಡೇಟ್

ಸರ್ಕಾರಿ ನೌಕರರಿಗೆ 2026ರ ಗಳಿಕೆ ರಜೆ ನಗದೀಕರಣ ಕುರಿತು ಬಿಗ್‌ ಅಪ್‌ಡೇಟ್

ಕರ್ನಾಟಕದ ಸರ್ಕಾರಿ ನೌಕರರ ಆದ್ಯ ಗಮನಕ್ಕೆ ಪ್ರಮುಖ ಮಾಹಿತಿ ಒಂದಿದೆ. ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ಅವರು ಈ ಕುರಿತು ಮಾಹಿತಿ ನೀಡಿದ್ದಾರೆ. ಗಳಿಕೆ ರಜೆ ನಗದೀಕರಣಕ್ಕೆ ಸಂಬಂಧಿಸಿದ ವಿಚಾರ ಇದಾಗಿದೆ.

2026ನೇ ಸಾಲಿನ ಗಳಿಕೆ ರಜೆಯನ್ನು ಅಧ್ಯರ್ಪಿಸಿ ನಗದೀಕರಣ ಸೌಲಭ್ಯ ಪಡೆಯುವ ಸಂಬಂಧ ಸರ್ಕಾರಿ ಆದೇಶ ಹೊರಡಿಸುವಂತೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಆರ್ಥಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ಮನವಿ ಮಾಡಲಾಗಿತ್ತು ಎಂದು ಹೇಳಿದ್ದಾರೆ.

ಸದರಿ ಕಡತವು ಚಾಲನೆಗೊಂಡು ಮಾನ್ಯ ಮುಖ್ಯಮಂತ್ರಿಗಳ ಅನುಮೋದನೆ ಬಾಕಿ ಇರುತ್ತದೆ. ಇಂದು ಅಥವಾ ನಾಳೆ ಮಾನ್ಯ ಮುಖ್ಯಮಂತ್ರಿಗಳಿಂದ ಕಡತವು ಅನುಮೋದನೆಯಾಗುವ ನಿರೀಕ್ಷೆಯಿದ್ದು, ನಂತರ ಸರ್ಕಾರಿ ಆದೇಶವಾಗಲಿದೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸರ್ಕಾರಿ ನೌಕರರ ಸಂಘದ ಪತ್ರ: ಈ ಕುರಿತು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಅವರು ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು, ಆರ್ಥಿಕ ಇಲಾಖೆ ಕರ್ನಾಟಕ ಸರ್ಕಾರ ಇವರಿಗೆ ಪತ್ರವೊಂದನ್ನು ಬರೆದಿದ್ದರು.

ಈ ಪತ್ರ 2026ನೇ ಸಾಲಿನಲ್ಲಿ ಗಳಿಕೆ ರಜೆಯನ್ನು ಆಧ್ಯರ್ಪಿಸಿ ನಗದೀಕರಣ ಸೌಲಭ್ಯದ ಆದೇಶ ಹೊರಡಿಸುವ ಬಗ್ಗೆ ಎಂಬ ವಿಷಯವನ್ನು ಒಳಗೊಂಡಿತ್ತು.

ಈ ವಿಷಯಕ್ಕೆ ಸಂಬಂಧಿಸಿದಂತೆ, ರಾಜ್ಯ ಸರ್ಕಾರದ ಸರ್ಕಾರಿ ಅಧಿಕಾರಿ/ ನೌಕರರು ಪ್ರತಿ ವರ್ಷ 15 ದಿನಗಳ ಗಳಿಕೆ ರಜೆಯನ್ನು ಸರ್ಕಾರಕ್ಕೆ ಆಧ್ಯರ್ಪಿಸಿ ರಜೆ ನಗದೀಕರಣ ಮಾಡಿಕೊಳ್ಳಲು ಅವಕಾಶವಿದ್ದು, ಅದರಂತೆ 2026ನೇ ಸಾಲಿನ ಬ್ಲಾಕ್ ಅವಧಿಗೆ ಗಳಿಕೆ ರಜೆ ನಗದೀಕರಣ ಸೌಲಭ್ಯವನ್ನು ಸರ್ಕಾರಿ ನೌಕರರು ಪಡೆಯಲು ಸರ್ಕಾರಿ ಆದೇಶ ಹೊರಡಿಸಲು ತಮ್ಮಲ್ಲಿ ಕೋರಿದೆ ಎಂದು ಮನವಿ ಸಲ್ಲಿಕೆ ಮಾಡಿದ್ದರು.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

Most Popular