HomeKarnatakaBIG NEWS: ರಜೆ ನಗದೀಕರಣ ಸಂವಿಧಾನ ಬದ್ದ ಹಕ್ಕು: ಹೈಕೋರ್ಟ್ ಆದೇಶ

BIG NEWS: ರಜೆ ನಗದೀಕರಣ ಸಂವಿಧಾನ ಬದ್ದ ಹಕ್ಕು: ಹೈಕೋರ್ಟ್ ಆದೇಶ

ಬೆಂಗಳೂರು: ರಜೆ ನಗದೀಕರಣ ಸಂವಿಧಾನಬದ್ಧ ಹಕ್ಕು ಎಂದು ಹೈಕೋರ್ಟ್ ಆದೇಶ ನೀಡಿದೆ. ರಜೆ ನಗರೀಕರಣವನ್ನು ವಿವೇಚನೆಯ ಉಡುಗೊರೆ ಎಂದು ಪರಿಗಣಿಸಲಾಗದು. ಅದೊಂದು ಸಂವಿಧಾನದಡಿ ಲಭ್ಯವಿರುವ ಕಾನೂನು ಬದ್ಧ ಹಕ್ಕಾಗಿದೆ ಎಂದು ಹೈಕೋರ್ಟ್ ಆದೇಶಿಸಿದೆ.

ರಜೆ ನಗದೀಕರಣ ಮಾಡದ ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿ ವಾಟರ್ ಮನ್ ಆಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದ ಪಾವಗಡದ ಹೆಚ್. ಚೆನ್ನಯ್ಯ ಅವರು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಪುರಸ್ಕರಿಸಿದೆ. ಹೈಕೋರ್ಟ್ ನ್ಯಾಯಮೂರ್ತಿ ಸಚಿನ್ ಶಂಕರ್ ಮಗದಂ ಅವರ ಪೀಠ ರಜೆ ನಗದೀಕರಣ ಸಂವಿಧಾನದಡಿ ಲಭ್ಯವಿರುವ ಕಾನೂನು ಬದ್ಧ ಹಕ್ಕಾಗಿದೆ ಎಂದು ಹೇಳಿದ್ದು, 1.32 ಲಕ್ಷ ರೂಪಾಯಿಗಳನ್ನು ಶೇಕಡ 6ರ ಬಡ್ಡಿ ದರದಲ್ಲಿ ಮೂರು ತಿಂಗಳಲ್ಲಿ ಪಾವತಿಸುವಂತೆ ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular