BREAKING: ವಿದ್ಯಾರ್ಥಿನಿ ಮೇಲೆ ಉಪನ್ಯಾಸಕನಿಂದ ನಿರಂತರ ಅತ್ಯಾಚಾರ; ಕೊಲೆ ಬೆದರಿಕೆ

ಬೆಳಗಾವಿ: ವಿದ್ಯಾರ್ಥಿಯ ಮೇಲೆ ಉಪನ್ಯಾಸಕನೊಬ್ಬ ನಿರಂತರವಾಗಿ ಬ್ಲ್ಯಾಕ್ ಮೇಲ್ ಮಾಡಿ ಅತ್ಯಾಚಾರವೆಸಗಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಬೆಳಗಾವಿ ನಗರ ಖಾಸಗಿ ಕಾಲೇಜು ಉಪನ್ಯಾಸಕ ನಾಗೇಶ್ವರ್ ಎಂಬಾತ ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ ಕಳೆದ ಎರಡು ವರ್ಷಗಳಿಂದ ನಿರಂತರ ಅತ್ಯಾಚಾರವೆಸಗುತ್ತಿದ್ದು, ಬೆದರಿಕೆ ಹಾಕುತ್ತಿರುವ ಬಗ್ಗೆ ಆರೋಪ ಕೇಳಿಬಂದಿದೆ.

ಸಂತ್ರಸ್ತ ವಿದ್ಯಾರ್ಥಿನಿಯ ಪೋಷಕರು ನೀಡಿದ ದೂರ್ನ ಹಿನ್ನೆಲೆಯಲ್ಲಿ ಬೆಳಗಾವಿ ಕ್ಯಾಂಪ್ ಠಾಣೆಯಲ್ಲಿ ಉಪನ್ಯಾಸಕನ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿದೆ.

ನಗರದ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿರುವ ಉಪನ್ಯಾಸಕ ನಾಗೇಶ್ವರ್, ವಿದ್ಯಾರ್ಥಿನಿಗೆ ತನ್ನ ಜೊತೆ ಲಿವ್ ಇನ್ ರಿಲೇಷನ್ ಶಿಪ್ ನಲ್ಲಿ ಇರಬೇಕು. ಕರೆದಾಗ ಬರಬೇಕು. ಇಬ್ಬರ ನಡುವೆ ಇರುವ ಸಂಬಂಧದ ಬಗ್ಗೆ ಯಾರುಗೂ ಬಾಯ್ಬಿಡಬಾರದು. ವಿಷಯ ಬಹಿರಂಗಪಡಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿ ಕ್ರೌರ್ಯ ಮೆರೆದಿದ್ದಾನೆ. ಉಪನ್ಯಾಸಕನ ದೌರ್ಜನ್ಯದಿಂದ ನಲುಗಿರುವ ವಿದ್ಯಾರ್ಥಿನಿ ಪೋಷಕರ ಬಳಿ ಹೇಳಿದ್ದಾಳೆ. ವಿಷಯ ತಿಳಿದ ಪೋಷಕರು ಕ್ಯಾಂಪ್ ಠಾಣೆಯಲ್ಲಿ ದೂರು ನೀಡಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read