‘ರಣಧೀರ ಕಂಠೀರವ’ ನಂತರ 36 ಚಿತ್ರಗಳಲ್ಲಿ ಜೊತೆಯಾಗಿ ನಟಿಸಿದ್ದ ಡಾ. ರಾಜ್ – ಲೀಲಾವತಿ

ನಟಿ ಲೀಲಾವತಿ ಅವರು ನಾಯಕಿಯಾಗಿ ಅಭಿನಯಿಸಿದ ಮೊದಲ ಚಿತ್ರ ‘ಮಾಂಗಲ್ಯ ಯೋಗ’. ಡಾ. ರಾಜ್ ಕುಮಾರ್ ಅವರೊಂದಿಗೆ ನಟಿಸಿದ ಮೊದಲ ಚಿತ್ರ ‘ರಣಧೀರ ಕಂಠೀರವ’.

‘ರಾಣಿ ಹೊನ್ನಮ್ಮ’ ಚಿತ್ರದ ಯಶಸ್ಸಿನ ನಂತರ ರಾಜ್ ಕುಮಾರ್ ಮತ್ತು ಲೀಲಾವತಿ ಅವರ ಜೋಡಿ ಜನಪ್ರಿಯವಾಯಿತು.

ಅವರು ‘ಸಂತ ತುಕಾರಾಂ’, ‘ಕಣ್ತೆರೆದು ನೋಡು’, ‘ಕೈವಾರ ಮಹಾತ್ಮೆ’, ‘ಗಾಳಿ ಗೋಪುರ’, ‘ಕನ್ಯಾರತ್ನ’, ‘ಕುಲವಧು’, ‘ವೀರ ಕೇಸರಿ’, ‘ಮನ ಮೆಚ್ಚಿದ ಮಡದಿ’ ಹೀಗೆ ಹಲವಾರು ಚಿತ್ರಗಳ ನಾಯಕಿಯಾದರು. ಈ ಜನಪ್ರಿಯ ಜೋಡಿ 36 ಚಿತ್ರಗಳಲ್ಲಿ ಒಟ್ಟಿಗೆ ನಟಿಸಿದ್ದಾರೆ. ಕೆಲಚಿತ್ರಗಳಲ್ಲಿ ನಾಯಕ ನಟರಿಗಿಂತ ಹೆಚ್ಚಿನ ಸಂಭಾವನೆ ಪಡೆಯುವ ನಾಯಕಿಯಾಗಿ ಗುರುತಿಸಿಕೊಂಡಿದ್ದರು.

ಆ ಕಾಲಕ್ಕೆ ಅತಿ ಹೆಚ್ಚು ಸಂಭಾವನೆ ಪಡೆಯುತ್ತಿದ್ದ ಸ್ಟಾರ್ ನಾಯಕಿಯಾಗಿದ್ದರು. ‘ರಣಧೀರ ಕಂಠೀರವ’ ಚಿತ್ರಕ್ಕೆ ಲೀಲಾವತಿ ಪಡೆದ ಸಂಭಾವನೆ 1,500 ರೂ. 60ರ ದಶಕದಲ್ಲಿ ನಾಯಕರಿಗಿಂತ ಹೆಚ್ಚು ಸಂಭಾವನೆ ಪಡೆದ ನಟಿಯಾಗಿದ್ದರು. 1949 ರಿಂದ 2009 ರವರೆಗೆ ಕನ್ನಡ ಚಿತ್ರರಂಗದಲ್ಲಿ ನಟಿಯಾಗಿ, ನಿರ್ಮಾಪಕಿಯಾಗಿ, ಬರಹಗಾರ್ತಿಯಾಗಿ ಸೇವೆ ಸಲ್ಲಿಸಿದ್ದಾರೆ.

ರಾಜಕುಮಾರ್, ಕಲ್ಯಾಣಕುಮಾರ್, ಉದಯಕುಮಾರ್ ಜೊತೆ ನಟಿಸಿದ್ದಾರೆ. ಅಂಬರೀಶ್, ಪ್ರಭಾಕರ್, ವಿಷ್ಣುವರ್ಧನ್, ಅನಂತನಾಗ್, ಶಂಕರ್ ನಾಗ್ ಸೇರಿದಂತೆ ಕನ್ನಡದ ಬಹುತೇಕ ನಟರ ಚಿತ್ರಗಳಲ್ಲಿ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

70ರ ದಶಕದ ಬಳಿಕ ಪೋಷಕ ಪಾತ್ರಗಳಲ್ಲಿ ಲೀಲಾವತಿಯವರು ತಮ್ಮನ್ನು ತೊಡಗಿಸಿಕೊಂಡರು. ನಾಯಕಿಯಾಗಿ, ಅಮ್ಮನಾಗಿ, ಅಜ್ಜಿಯಾಗಿ ನಾನಾಬಗೆಯ ಪೋಷಕಪಾತ್ರಗಳಲ್ಲಿ ನಟಿಸಿದರು. ಅವುಗಳಲ್ಲಿ ‘ಗೆಜ್ಜೆ ಪೂಜೆ’, ‘ಸಿಪಾಯಿ ರಾಮು’, ‘ನಾಗರಹಾವು’, ‘ಭಕ್ತ ಕುಂಬಾರ’ ಮುಂತಾದ ಚಿತ್ರಗಳು ಪ್ರಮುಖವಾದವು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read