ಇಂದು ʻಸಂಸʼ ಬಯಲು ರಂಗಮಂದಿರದಲ್ಲಿ ʻಲೀಲಾವತಿʼ ಅಂತಿಮ ದರ್ಶನಕ್ಕೆ ಸಿದ್ಧತೆ

ಬೆಂಗಳೂರು : ಹಿರಿಯ ನಟಿ ಲೀಲಾವತಿ ಅವರ ಅಂತಿಮ ದರ್ಶನಕ್ಕೆ ಸಾರ್ವಜನಿಕರಿಗೆ ಅವಕಾಶ ಮಾಡಿಕೊಡಲಾಗಿದ್ದು, ನೆಲಮಂಗಲದ ಡಾ.ಬಿ.ಆರ್.‌ ಅಂಬೇಡ್ಕರ್‌ ಕ್ರೀಡಾಂಗಣ ಹಾಗೂ ರವೀಂದ್ರ ಕಲಾ ಕ್ಷೇತ್ರದ ಸಂಸ ಬಯಲು ರಂಗ ಮಂದಿರದಲ್ಲಿ ಅವಕಾಶ ನೀಡಲಾಗಿದೆ.

ಇಂದು ಬೆಳಗ್ಗೆ 5.30 ರಿಂದ 10 ರವರೆಗೆ ನೆಲಮಂಗಲದ ಡಾ. ಬಿ.ಆರ್.‌ ಅಂಬೇಡ್ಕರ್‌ ಕ್ರೀಡಾಂಗಣದಲ್ಲಿ ವ್ಯವಸ್ಥೆ ಮಾಡಲಾಗಿದ್ದು, ಆ ನಂತರ ಸಿಎಂ ಸಿದ್ದರಾಮಯ್ಯ ಸಲಹೆ ಹಾಗೂ ವಿನೋದ್‌ ರಾಜ್‌ ಒಪ್ಪಿಗೆ ಮೇರೆಗೆ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದ ಬಯಲು ರಂಗಮಂದಿರದಲ್ಲಿ 10.45 ರಿಂದ ಮಧ್ಯಾಹ್ನ 2.30 ರವರೆಗೆ ಸಾರ್ವಜನಿಕರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ.

ಬಳಿಕ ಅಲ್ಲಿಂದ ನೇರವಾಗಿ ಸೋಲದೇವನಹಳ್ಳಿಗೆ ಪಾರ್ಥಿವ ಶರೀರವನ್ನು ವಾಪಸ್‌ ಕೊಂಡೊಯ್ದು ತೋಟದಲ್ಲಿ ಸಂಜೆ4 ಗಂಟೆ ಸುಮಾರಿಗೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ ಮಾಡಲಾಗುತ್ತದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಶಿವಶಂಕರ್‌ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read