HomeEntertainmentಹಿರಿಯ ನಟಿ ಲೀಲಾವತಿ ಆರೋಗ್ಯ ವಿಚಾರಿಸಿದ ಶಿವರಾಜ್ ಕುಮಾರ್

ಹಿರಿಯ ನಟಿ ಲೀಲಾವತಿ ಆರೋಗ್ಯ ವಿಚಾರಿಸಿದ ಶಿವರಾಜ್ ಕುಮಾರ್

ಬೆಂಗಳೂರು: ಕನ್ನಡ ಚಿತ್ರರಂಗದ ಮೇರು ನಟಿ ಡಾ.ಲೀಲಾವತಿ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದು, ನಟ ಶಿವರಾಜ್ ಕುಮಾರ್ ಹಾಗೂ ಪತ್ನಿ ಗೀತಾ ಶಿವರಾಜ್ ಕುಮಾರ್ ಲೀಲಾವತಿಯವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದರು.

ಬೆಂಗಳೂರಿನ ನೆಲಮಂಗಲ ಬಳಿಯ ಸೋಲದೇವನಹಳ್ಳಿಯಲ್ಲಿರುವ ಲೀಲಾವತಿ ಅವರ ತೋಟದ ಮನೆಗೆ ಭೇಟಿ ನೀಡಿದ ಶಿವರಾಜ್ ಕುಮಾರ್ ದಂಪತಿ, ಲೀಲಾವತಿಯವರನ್ನು ಭೇಟಿಯಾಗಿ ಆರೋಗ್ಯಸ್ಥಿತಿ ವಿಚಾರಿಸಿದರು. ಲೀಲಾವತಿ ಪುತ್ರ ವಿನೋದ್ ರಾಜ್ ಅವರಿಗೆ ಧೈರ್ಯ ತುಂಬಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ವೇಳೆ ಮಾತನಾಡಿದ ನಟ ಶಿವರಾಜ್ ಕುಮಾರ್, ಲೀಲಾವತಿಯವರು ನನ್ನ ಧ್ವನಿಯನ್ನು ಗುರುತಿಸಿದರು. ಅವರ ಪ್ರೀತಿ ಮರೆಯಲು ಸಾಧ್ಯವಿಲ್ಲ. ದೇವರ ದಯೆ, ಜನರ ಪ್ರೀತಿಯಿಂದ ಅವರು ಬೇಗನೇ ಗುಣಮುಖರಾಗುತ್ತಾರೆ. ಲೀಲಾವತಿಯವರ ಹೆಸರಲ್ಲಿ ಪಶು ಆಸ್ಪತ್ರೆ ಆರಂಭವಾಗಿರುವುದು ಸಂತೋಷದ ವಿಚಾರ ಎಂದು ಹೇಳಿದರು.

For Latest News Updates, Join Our Whatsapp Community🚩
RELATED ARTICLES

Most Popular