HomeKarnatakaಮತದಾನ ಮಾಡಿದವರ ಎಡಗೈ ತೋರು ಬೆರಳಿಗೆ ಶಾಯಿ

ಮತದಾನ ಮಾಡಿದವರ ಎಡಗೈ ತೋರು ಬೆರಳಿಗೆ ಶಾಯಿ

ಬೆಂಗಳೂರು: ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ ಇಂದು ಬೆಳಗ್ಗೆ 7ರಿಂದ ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದೆ.

ಮತದಾನ ಮಾಡಲು ಮತಗಟ್ಟೆಗೆ ಹೋಗುವ ಮತದಾರರು ಚುನಾವಣಾ ಆಯೋಗ ನಿಗದಿಪಡಿಸಿದ ಗುರುತಿನ ಚೀಟಿಗಳಲ್ಲಿ ಒಂದನ್ನು ತೋರಿಸಿ ಮತದಾನ ಮಾಡಬಹುದಾಗಿದೆ. ಮತಗಟ್ಟೆಗಳಿಗೆ ಮೊಬೈಲ್ ತೆಗೆದುಕೊಂಡು ಹೋಗುವಂತಿಲ್ಲ. ಈ ಬಾರಿಯ ಚುನಾವಣೆಯಲ್ಲಿ ಮತದಾರರ ಎಡಗೈ ತೋರು ಬೆರಳಿಗೆ ಗುರುತಿನ ಶಾಯಿ ಹಾಕಲಾಗುತ್ತದೆ. ಮತಗಟ್ಟೆಗೆ ಆಗಮಿಸಿದ ಸಂದರ್ಭದಲ್ಲಿ ಪರಿಶೀಲನೆ ಬಳಿಕ ಅಳಿಸಲಾಗದ ಶಾಯಿ ಹಾಕಲಾಗುವುದು. ಮತದಾರರ ಸೆಳೆಯಲು ಸಖೀ ಮತಗಟ್ಟೆ, ವಿಶೇಷ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular