HomeKarnatakaBREAKING : ಅಡ್ಡ ಮತದಾನ ಮಾಡಿದ ಶಾಸಕ S.T ಸೋಮಶೇಖರ್ ವಿರುದ್ಧ ಕಾನೂನು ಕ್ರಮ :...

BREAKING : ಅಡ್ಡ ಮತದಾನ ಮಾಡಿದ ಶಾಸಕ S.T ಸೋಮಶೇಖರ್ ವಿರುದ್ಧ ಕಾನೂನು ಕ್ರಮ : ಆರ್. ಅಶೋಕ್

ಬೆಂಗಳೂರು : ಅಡ್ಡಮತದಾನ ಮಾಡಿದ ಶಾಸಕ ಎಸ್.ಟಿ ಸೋಮಶೇಖರ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ವಿಪಕ್ಷ ನಾಯಕ ಆರ್. ಅಶೋಕ್ ಹೇಳಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿದ ಅವರು ಅಡ್ಡಮತದಾನ ಮಾಡಿದ ಶಾಸಕ ಸೋಮಶೇಖರ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳುತ್ತೇವೆ, ಈ ಬಗ್ಗೆ ಕಾನೂನು ತಜ್ಞರ ಜೊತೆ ಚರ್ಚಿಸಿ ನಿರ್ಧಾರ ಕೈಗೊಳ್ಳುತ್ತೇವೆ. ಸೋಮಶೇಖರ್ ಬಿಜೆಪಿಗೆ ರಾಜೀನಾಮೆ ನೀಡಿ ಕಾಂಗ್ರೆಸ್ ಗೆ ವೋಟ್ ಹಾಕಬಹುದಿತ್ತು ಎಂದು ಹೇಳಿದ್ದಾರೆ. ಪಕ್ಷಕ್ಕೆ ದ್ರೋಹ ಮಾಡಿದವರ ಬಗ್ಗೆ ಹೆಚ್ಚು ಮಾತನಾಡುವುದಿಲ್ಲ ಎಂದರು.  ಸೋಮಶೇಖರ್ ಅಡ್ಡಮತದಾನ ಮಾಡಿರುವ ಬಗ್ಗೆ ನಾವು ಚರ್ಚೆ ನಡೆಸಿ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಆರ್ ಅಶೋಕ್ ಹೇಳಿದರು.

ಹಾಗೂ ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡಮತದಾನದ ಮೂಲಕ ಕಾಂಗ್ರೆಸ್ ಗೆ ಮತ ಹಾಕಿದ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ವಿರುದ್ಧ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.ಶಾಸಕ ಎಸ್.ಟಿ.ಸೋಮಶೇಖರ್ ಬಿಜೆಪಿ ಶಾಸಕರಾಗಿ, ಕಾಂಗ್ರೆಸ್ ಗೆ ಮತಚಲಾವಾಣೆ ಮಾಡಿದ್ದು, ಪಕ್ಷಕ್ಕೆ ಮಾಡಿರುವ ದ್ರೋಹ ಎಂದು ಕಾರ್ಯಕರ್ತರು ಕಿಡಿಕಾರಿದ್ದಾರೆ. ಯಶವಂತಪುರ, ಕೆಂಗೇರಿ ಉಪನಗರದಲ್ಲಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular