HomeKarnatakaಹಣದಾಸೆಗೆ ನಕಲಿ ದಾಖಲೆ ಸೃಷ್ಟಿಸುತ್ತಿದ್ದವರ ವಿರುದ್ದ ಕಾನೂನು ಕ್ರಮ: ಸಾರ್ವಜನಿಕರು ಎಚ್ಚರಿಕೆಯಿಂದಿರಲು‌ ಡಿಸಿ ಮನವಿ

ಹಣದಾಸೆಗೆ ನಕಲಿ ದಾಖಲೆ ಸೃಷ್ಟಿಸುತ್ತಿದ್ದವರ ವಿರುದ್ದ ಕಾನೂನು ಕ್ರಮ: ಸಾರ್ವಜನಿಕರು ಎಚ್ಚರಿಕೆಯಿಂದಿರಲು‌ ಡಿಸಿ ಮನವಿ

ಶಿವಮೊಗ್ಗ: ಹಣದಾಸೆಗಾಗಿ ಸರ್ಕಾರಿ ದಾಖಲೆಗಳನ್ನು ನಕಲಿ ಮಾಡಿ, ಖಾಸಗಿ‌ ವ್ಯಕ್ತಿಗಳಿಗೆ ಜಮೀನು ಮಂಜೂರು ಮಾಡಲು ಪ್ರಯತ್ನಿಸುತ್ತಿದ್ದ ಸಾಗರ ತಹಶೀಲ್ದಾರ್ ಕಚೇರಿ ಸಿಬ್ಬಂದಿಗಳ ವಿರುದ್ದ ಈಗಾಗಲೇ ಎಫ್ಐಆರ್ ದಾಖಲಿಸಿ, ವಿಚಾರಣೆ ಕೈಗೊಳ್ಳಲಾಗಿದ್ದು, ಸಾರ್ವಜನಿಕರು ಇಂತಹ ವಿಚಾರಗಳಿಂದ ಎಚ್ಚರಿಕೆಯಿಂದ ಇರಬೇಕೆಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ತಿಳಿಸಿದ್ದಾರೆ.

ಸಾಗರ ತಹಶೀಲ್ದಾರ್ ಕಚೇರಿಯ ಸಿಬ್ಬಂದಿಗಳು ಜಮೀನು ಮಂಜೂರು ಮಾಡಿಸುವುದಾಗಿ  ಖಾಸಗಿ‌ ವ್ಯಕ್ತಿಗಳಿಂದ  ಹಣ ಪಡೆದು ಸರ್ಕಾರಿ ದಾಖಲೆಗಳನ್ನು ನಕಲಿ ಮಾಡುತ್ತಿದ್ದ ಜಾಲವೊಂದನ್ನು ಸಾಗರ ತಹಶೀಲ್ದಾರ್ ರಶ್ಮಿ ಹಾಲೇಶ್ ಅವರು ಬಯಲಿಗೆಳೆದಿದ್ದು,  ಈ ಪ್ರಕರಣಕ್ಕೆ ಸಂಬಂಧಿಸಿದ ಆರು ಜನ ಆರೋಪಿಗಳ ವಿರುದ್ದ ಸಾಗರ ಪೇಟೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿ, ವಿಚಾರಣೆ ಆರಂಭಿಸಲಾಗಿದೆ.

ಮಾರ್ಚ್ 18ರ ಬುಧವಾರ ಮಧ್ಯಾಹ್ನ ತಹಶೀಲ್ದಾರ್ ಕಚೇರಿಯ ದಾಖಲೆ ಕೊಠಡಿಯ ಮೇಲ್ವಿಚಾರಕರು ಹಳೆಯ ಮಂಜೂರಾತಿ ಪತ್ರಗಳನ್ನು ತಿದ್ದುಪಡಿ ಮಾಡುತ್ತಿರುವುದನ್ನು ತಹಶೀಲ್ದಾರ್ ಅವರು ಖುದ್ದಾಗಿ ಗಮನಿಸಿದ್ದಾರೆ. ಸರ್ಕಾರಿ ಜಮೀನನ್ನು ಖಾಸಗಿ ವ್ಯಕ್ತಿಗಳಿಗೆ ಮಂಜೂರು ಮಾಡಲು ನಕಲಿ ದಾಖಲೆ ಸೃಷ್ಟಿಸುವ ಕೆಲಸ ಇಲ್ಲಿ ನಡೆಯುತ್ತಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 ಸಾಗರ ತಹಶಿಲ್ದಾರ್ ಕಚೇರಿಯಲ್ಲಿ ಈ ಕಾರ್ಯವೆಸಗುತ್ತಿದ್ದವರ ವಿರುದ್ದ ಸೂಕ್ತ ಕಾನೂನು ಕ್ರಮ‌ ಕೈಗೊಳ್ಳಲಾಗುತ್ತಿದ್ದು, ಹೀಗೆ ಯಾವುದೇ ಸರ್ಕಾರಿ ದಾಖಲೆಗಳನ್ನು ನಕಲು ಮಾಡಿ, ಜಮೀನು ಮಂಜೂರು ಮಾಡಲು ಬರುವುದಿಲ್ಲ. ಆದ್ದರಿಂದ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕೆಂದು ಅವರು ಮನವಿ‌ ಮಾಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular