HomeKarnatakaBig News: ಎಚ್ಚರ…ಮಲ್ಲಿಕಾರ್ಜುನ ಮುತ್ಯಾ ವಿಡಿಯೋ ಶೇರ್‌ ಮಾಡಬೇಡಿ

Big News: ಎಚ್ಚರ…ಮಲ್ಲಿಕಾರ್ಜುನ ಮುತ್ಯಾ ವಿಡಿಯೋ ಶೇರ್‌ ಮಾಡಬೇಡಿ

ಅಪ್ರಾಪ್ತ ಬಾಲಕಿ ಜೊತೆ ಯಾದಗಿರಿಯ ಮಹಲ್ ರೋಜಾ ಮಠದ ಸ್ವಯಂ ಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ಅನುಚಿತವಾಗಿ ವರ್ತಿಸಿದ ಪ್ರಕರಣದ ಸಂಬಂಧ ಪೋಕ್ಸೋ ಪ್ರಕರಣ ದಾಖಲಾಗಿದೆ.

ಈಗ ಯಾದಗಿರಿ ಎಸ್ಪಿ ಪೃಥ್ವಿಕ್ ಶಂಕರ್ ಜನರಿಗೆ ಎಚ್ಚರಿಕೆಯೊಂದನ್ನು ನೀಡಿದ್ದು, ಮಲ್ಲಿಕಾರ್ಜುನ ಮುತ್ಯಾ ಪ್ರಕರಣಕ್ಕೆ ಸಂಬಂಧಿಸಿದ ಫೋಟೋ, ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪಲೋಡ್ ಮಾಡಿದರೆ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ಮಲ್ಲಿಕಾರ್ಜುನ ಮುತ್ಯಾ ವಿರುದ್ಧದ ಪೋಕ್ಸೋ ಪ್ರಕರಣದ ಸಂಬಂಧ ಬಾಲಕಿಯನ್ನು ಗುರುತಿಸಬಹುದಾದ ಯಾವುದೇ ಮಾಹಿತಿಯನ್ನು ಮತ್ತು ಬಾಲಕಿಯ ಕುಟುಂಬ ಸದಸ್ಯರನ್ನು ಒಳಗೊಂಡ ಫೋಟೋ ಹಾಗೂ ಸಂಗ್ರಹಿಸಿ ಇಟ್ಟುಕೊಂಡ ವಿಡಿಯೋ ಕ್ಲಿಪಿಂಗ್ ಸಾಮಾಜಿಕ ಜಾಲತಾಣಗಳಲ್ಲಿ ಅಪಲೋಡ್ ಮಾಡುವಂತಿಲ್ಲ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಫೋಟೋ, ವಿಡಿಯೋವನ್ನು ಬೇರೆಯವರಿಗೆ ಶೇರ್ ಮಾಡಬಾರದು. ಒಂದು ವೇಳೆ ಮಾಡಿದಲ್ಲಿ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಯಾದಗಿರಿ ಎಸ್ಪಿ ಎಚ್ಚರಿಸಿದ್ದಾರೆ.

ಯಾದಗಿರಿ ಜಿಲ್ಲೆಯ ಗೋಗಿ ಪೊಲೀಸ್ ಠಾಣೆಯಲ್ಲಿ ದಿನಾಂಕ 25-02-2026 ರಂದು ಶಹಾಪೂರದ ಅಭಿವೃದ್ಧಿ ಯೋಜನಾಧಿಕಾರಿ ಮಲ್ಲಣ್ಣ ಎಂಬುವರು ಸಲ್ಲಿಸಿದ ದೂರಿನ ಮೇರೆಗೆ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲಾಗಿದೆ.

ಗೋಗಿ ಪೊಲೀಸ್ ಠಾಣೆ ಗುನ್ನೆ ನಂ:25/2026 ಕಲಂ 75(2), ಬಿ.ಎನ್.ಎಸ್ ಕಾಯ್ದೆ-2023 ಮತ್ತು ಕಲಂ 12 ಪೋಕ್ಸೋ ಯಾಕ್ಟ್-2012 ಪ್ರಕಾರ ಪ್ರಕರಣ ದಾಖಲಾಗಿ ತನಿಖೆ ಕೈಗೊಳ್ಳಲಾಗಿದ್ದು, ಸಾರ್ವಜನಿಕರು ಈ ಪ್ರಕರಣದಕ್ಕೆ ಯಾವುದೇ ಫೋಟೋ ಅಥವಾ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡಬೇಡಿ ಎಂದು ಸೂಚಿಸಲಾಗಿದೆ.

ವಾಟ್ಸಪ್, ಫೇಸ್‌ಬುಕ್, ಇನ್‌ಸ್ಟಾಗ್ರಾಮ್ ಸೇರಿದಂತೆ ಇತರ ಕಡೆಗಳಲ್ಲಿ ವಿಡಿಯೋ, ಫೋಟೋ ಹಂಚಿಕೊಂಡಲ್ಲಿ ಅಂತವರ ವಿರುದ್ಧ ಸೂಕ್ತ ಕಾನೂನು ಕ್ರಮಕೈಗೊಳ್ಳಲಾಗುತ್ತದೆ ಎಂದು ಎಸ್ಪಿ ಎಚ್ಚರಿಸಿದ್ದಾರೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular